ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ ನ.7ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ  ಶಶಿಪ್ರಭ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ವೈದ್ಯಾಧಿಕಾರಿ ವಿನಯ್ ಕುಮಾರ್ ರವರು ಭಾಗವಹಿಸಿದ್ದರು.

ಕಾರ್ಯದರ್ಶಿ  ಕ್ರಿಸ್ಥಿನ್ ಮರ್ಲಿನ್ ಡಿಸೋಜ ಗ್ರಾಮ ಪಂಚಾಯತ್ ನ ಸಂಕ್ಷಿಪ್ತ ವರದಿ ಹಾಗೂ ಕಾಮಗಾರಿ ಗಳ ವಿವರ ನೀಡಿದರು. ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಗ್ರಾಮ ಪಂಚಾಯತ್ ಅಭವೃದ್ಧಿ ಅಧಿಕಾರಿ ಪುರುಷೋತ್ತಮ ಜಿ., ಗ್ರಾಮ ಪಂಚಾಯತ್ ಸದಸ್ಯರು,ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ರಾಜೀವ್ ಪೂಜಾರಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯ ಗೋಪಾಲಕೃಷ್ಣ ಕೆ ಕಾರ್ಯಕ್ರಮ ನಿರೂಪಿಸಿದರು.   ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಕುಮಾರ್ ಪುಳಿಮಜಲು ವಂದನಾರ್ಪಣೆಗೈದರು .

LEAVE A REPLY

Please enter your comment!
Please enter your name here