HomePage_Banner
HomePage_Banner
HomePage_Banner

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

Puttur_Advt_NewsUnder_1
Puttur_Advt_NewsUnder_1

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್(81 ವ) ಅವರು ಜೂ.10 ರಂದು ಬೆಳಗ್ಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ.

ಕನ್ನಡಕ್ಕೆ 6ನೇ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟಿದ್ದ ಗಿರೀಶ್ ಕಾರ್ನಾಡ್ ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಗಿರೀಶ ಕಾರ್ನಾಡ್‌ರು 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ್ದರು. ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಕರ್ನಾಟಕ ಕಾಲೇಜಿನಲ್ಲಿ ಪಡೆದಿದ್ದರು.  ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ್ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ. ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರುತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣಿತಿ ಹೊಂದಿದ್ದ ಕಾರ್ನಾಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯ ಪಸರಿಸಿದ್ದರು. ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.

ಕಾರ್ನಾಡರು ಹಲವಾರು ಹುದ್ದೆಗಳು, ಪದ್ಮಶ್ರೀ -1974, ಪದ್ಮಭೂಷಣ -1992, ಜ್ಞಾನಪೀಠ -1998, ಕಾಳಿದಾಸ ಸಮ್ಮಾನ್ – 1998,   ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ,  ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದರು.

ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದು ಜೂ.10 ರಂದು ಎಲ್ಲಾ ಸರಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.