ಪುತ್ತೂರು: ಸಂಪ್ಯ ಶಾಲಾ ವಠಾರದಲ್ಲಿ ಬಿಲ್ಲವ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಆರ್ಯಾಪು ಬಿಲ್ಲವ ಗ್ರಾಮ ಸಮಿತಿ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.9 ರಂದು ನಡೆಯಿತು.
ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಕಾರ್ಯದರ್ಶಿ ಕೇಶವ ಪೂಜಾರಿ ಬೆದ್ರಾಳ, ನಾರಾಯಣ ಗುರು ಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್ ಸಿ ನಾರಾಯಣ್, ಪುತ್ತೂರು ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ, ನಾಗೇಶ್ ಬಲ್ನಾಡ್, ಆರ್ಯಾಪು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಸಂಪ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.