ಉಜಿರೆ ಬಿ ಎಡ್ ಕಾಲೇಜಿನಲ್ಲಿ ತರಬೇತು ಶಿಬಿರ

0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ “ತರಗತಿ ನಿರ್ವಹಣೆ” ಎಂಬ ವಿಷಯದಲ್ಲಿ ತರಬೇತು ಕಾರ್ಯಕ್ರಮ ಜರುಗಿತು.

ತರಬೇತುದಾರರಾಗಿ ಬೆಳಾಲು ಶ್ರೀ ಧ ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಆಗಮಿಸಿದ್ದರು.

ಸಂವಹನ ಕೌಶಲ , ಪ್ರಶ್ನಾ ತಂತ್ರಗಳು, ಮಕ್ಕಳನ್ನು ಕ್ರಿಯಾತ್ಮಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ಮುಂತಾದ ವಿಷಯಗಳಲ್ಲಿ ಚಟುವಟಿಕೆಗಳಾಧಾರಿತವಾಗಿ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಟ್ಟರು. ಕಲಿಕಾ ಪ್ರಕ್ರಿಯೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು, ಬೋಧನೆಯಲ್ಲಿ ವೈವಿಧ್ಯಮಯ ಚಟುವಟಿಕೆಗಳ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ತಿಳಿಸುವುದರೊಂದಿಗೆ ವಿವಿಧ ಚಟುವಟಿಕೆಗಳ ಮೂಲಕ ಪ್ರಾಯೋಗಿಕವಾಗಿ ತರಬೇತಿಯನ್ನು ನಡೆಸಿಕೊಟ್ಟರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ದಾನಾರವರು ವಹಿಸಿದ್ದರು. ಪ್ರಶಿಕ್ಷಣಾರ್ಥಿಗಳು ಸಭಾ ಕಾರ್ಯಕ್ರಮದ ಸಂಯೋಜನೆ ಮಾಡಿದರು.

LEAVE A REPLY

Please enter your comment!
Please enter your name here