ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022

0


ಬೆಳ್ತಂಗಡಿ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಕಡಬ ಹಾಗೂ ಅಕ್ಷಯ ಮಹಾ ಸಂಘ ಶಿರಾಡಿ ಇವುಗಳ ಸಹಭಾಗಿತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ- ಸಹಾಯ ಸಂಘಗಳ ಮಹಿಳೆಯರಿಗಾಗಿ ಸಂಘೋತ್ಸವ- 2022 ಎಂಬ ವಿಭಿನ್ನ ಕಾರ್ಯಕ್ರಮವನ್ನು  ನ .9  ರಂದು ಶಿರಾಡಿ ಸಂತ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು.

ಉದನೆ ಸಂತ ತೋಮಸ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂದನೀಯ ಫಾ. ಸೆಬಾಸ್ಟಿಯನ್ ಇಂಚನೆಲ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಾಡಿ ಅಕ್ಷಯ ಮಹಾ ಸಂಘದ ಅಧ್ಯಕ್ಷರಾದ ಶ್ರೀಮತಿ ಬಿಂಧು ಸನ್ನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು ಹಾಗೂ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಿಲಾಯಿತು.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಸ್ಥಳೀಯ ಕಾನ್ವೆಂಟಿನ ಧರ್ಮ ಭಗಿನಿಯರಾದ ಸಿಸ್ಟರ್ ಅರ್ಚನಾ, ಸಿಸ್ಟರ್ ಲಿನ್ಸಿ ಆಂಡ್ರೂಸ್, ಕಡಬ ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಉಷಾ ಜೋಯ್, ಬೆಳ್ತಂಗಡಿ ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ ಎಸ್ ಸಂಸ್ಥೆಯ ಮಹಿಳಾ ಸಶಕ್ತತಾ ಯೋಜನೆಯ ಸಂಯೋಜಕಿಯಾದ ಶ್ರೀಮತಿ ಸಿಸಿಲಿಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು.
ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಸಿ.ವಿ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಲ್ಲಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here