Home_Page_Advt
Home_Page_Advt
Home_Page_Advt

ರಾಮಕುಂಜ: ಎನ್.ಎಸ್.ಎಸ್ ಚಟುವಟಿಕೆಗಳಿಗೆ ಚಾಲನೆ

Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

ತಾ.ಪಂ.ಸದಸ್ಯೆ ತೇಜಸ್ವಿನಿ ಶೇಖರ ಗೌಡ ಕಟ್ಟಪುಣಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತುಳಿದಷ್ಟು ಗರಿಕೆ ಚಿಗುರುವಂತೆ ವಿದ್ಯಾರ್ಥಿಗಳು ಕಷ್ಟ ಸಹಿಷ್ಣುಗಳಾಗಿ ಸಾಧನೆ ಮಾಡಬೇಕು, ಕೇವಲ ಸ್ವಾರ್ಥಪರರಾಗದೆ ಸಾಮಾಜಿಕವಾಗಿ ವಿಕಾಸಗೊಳ್ಳಬೇಕು ಎಂದು ಹೇಳಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಗೆ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ.ಸತೀಶ್ ಭಟ್‌ರವರು ಶುಭಹಾರೈಸಿದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಗಣರಾಜ ಕುಂಬ್ಳೆ ಸ್ವಾಗತಿಸಿ, ಎನ್.ಎಸ್.ಎಸ್ ಸಹಯೋಜನಾಧಿಕಾರಿ ಸತೀಶ್ ಜಿ.ಆರ್. ವಂದಿಸಿದರು. ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಉಪನ್ಯಾಸಕ ಚೇತನ್. ಯಂ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ನವೀನ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.