HomePage_Banner
HomePage_Banner

ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಸ್ವಚ್ಛ ಮೇವ ಜಯತೇ ಆಂದೋಲನ


ಹಿರೇಬಂಡಾಡಿ: ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ನಡೆಯುತ್ತಿರುವ ಸ್ವಚ್ಛ ಮೇವ ಜಯತೇ ಆಂದೋಲನದ ಅಂಗವಾಗಿ ಹಿರೇಬಂಡಾಡಿ ಗ್ರಾ.ಪಂ.ವತಿಯಿಂದ ಸ್ವಚ್ಛತಾ ಆಂದೋಲನ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್‍ಯಕ್ರಮ ಜೂ.11ರಂದು ನಡೆಯಿತು.

ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷ ಹಮ್ಮಬ್ಬ ಶೌಕತ್ ಆಲಿಯವರು ಗ್ರಾ.ಪಂ.ಸದಸ್ಯೆ ಚಂದ್ರಾವತಿ ನೆಹರುತೋಟರವರಿಗೆ ಸಸಿ ವಿತರಿಸುವ ಕಾರ್‍ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ. ಉಪಾಧ್ಯಕ್ಷೆ ಉಷಾಲಕ್ಷ್ಮೀಶ ನಿಡ್ಡೆಂಕಿ, ಹಿರೇಬಂಡಾಡಿ ಸರಕಾರಿ ಪ್ರೌಢಶಾಲಾ ಮುಖ್ಯಗುರು ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರಾದ ಸದಾನಂದ ಶೆಟ್ಟಿ ಅಡೆಕ್ಕಾಲ್, ವಿಶ್ವನಾಥ ಕೆಮ್ಮಾಟೆ, ಮುದ್ದ ತಾಳಿಪಡ್ಪು, ಮಾಲತಿ ಹರಿನಾರಾಯಣ ಕೆಮ್ಮಾರ, ಪುಷ್ಪಾವತಿ ಶಾಂತಿತ್ತಡ್ಡ, ಮಂಜುಳಾ ಸರೋಳಿ, ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಗುರು ಬಾಬು ಟಿ, ಹಾಗೂ ಕೆಮ್ಮಾರ, ಅಡೆಕ್ಕಲ್ ಶಾಲಾ ಶಿಕ್ಷಕರು, ಎಸ್.ಡಿ.ಎಮ್.ಸಿ ಅಧ್ಯಕ್ಷರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂ.ಸಿಬ್ಬಂದಿಗಳು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ದಿನೇಶ್ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.