Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ: ಸೈಂಟ್ ಮೇರಿಸ್ ಪ್ರೌಢಶಾಲಾ ಸ್ಕೌಟ್, ಗೈಡ್ಸ್ ವಿದ್ಯಾರ್ಥಿಗಳ ಸೈಕಲ್ ರ್‍ಯಾಲಿ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಇಲ್ಲಿನ ಸೈಂಟ್ ಮೇರಿಸ್ ಪ್ರೌಢಶಾಲೆಯ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಿಂದ ಹೊರ ಸಂಚಾರ ಹಾಗೂ ಸೈಕಲ್ ರ್‍ಯಾಲಿ ಜೂ.8ರಂದು ನಡೆಯಿತು.

ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ವಂ| ಅಬೆಲ್ ಲೋಬೋರವರು ಮಾತನಾಡಿ, ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಮೂಡಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಮುಂದಿನ ಉತ್ತಮ ನಾಗರೀಕರಾಗಲು ಮತ್ತು ಪ್ರಕೃತಿ ಸಂರಕ್ಷಣೆ ಮಾಡಲು ಸಾಧ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಸಿಆರ್‌ಪಿ ಅಶ್ರಫ್‌ರವರು ರ್‍ಯಾಲಿ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಜನರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಾ ಸೈಕಲ್ ಸವಾರಿ ನಡೆಸಿದ ವಿದ್ಯಾರ್ಥಿಗಳು ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಗೆ ತೆರಳಿ ಅಲ್ಲಿ ಪರಿಸರ ಸ್ವಚ್ಚತೆ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಶಾಲಾ ಸುಮಾರು 35 ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ರ್‍ಯಾಲಿಯಲ್ಲಿ ಭಾಗವಹಿಸಿದ್ದರು.

ಸ್ಕೌಟರ್‌ಗಳಾದ ಸತೀಶ್, ಪುರುಷೋತ್ತಮ, ಗೈಡರ್‌ಗಳಾದ ಕು| ಅಕ್ಷಯ ರಾವ್, ಶ್ವೇತಾ, ನಮಿತಾ ಹಾಗೂ ಶಶಿಧರ್‌ರವರು ಮಾರ್ಗದರ್ಶನ ನೀಡಿದರು. ಹಿರೇಬಂಡಾಡಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಹೊಸಮನೆ, ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷ ಹಮ್ಮಬ್ಬ ಶೌಕತ್ ಆಲಿ, ಶಾಲಾ ಮುಖ್ಯಶಿಕ್ಷಕ ಬಾಬು ಟಿ., ಶಾಲಾ ಶಿಕ್ಷಕ ವೃಂದ, ಮಕ್ಕಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.