ಕುಂತೂರುಪದವು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಕಡಬ: 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕುಂತೂರು ಪದವು ಸಂತಜಾರ್ಜ್ ಪ್ರೌಢಶಾಲೆಯಲ್ಲಿ 625ರಲ್ಲಿ 606 ಅಂಕ ಪಡೆದ ಪೃಥ್ವಿ ಕೆ., ಹಾಗೂ 600 ಅಂಕಗಳನ್ನು ಪಡೆದ ಚರಣ್‌ರಾಜ್ ಹಾಗೂ ಅವರ ಪೋಷಕರನ್ನು ಆಡಳಿತ ಮಂಡಳಿ ವತಿಯಿಂದ ಜೂ.8ರಂದು ನಡೆದ ಶಾಲಾ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಸನ್ಮಾನಿಸಲಾಯಿತು.

ಮಲಂಕರ ಆರ್ಥೋಡಕ್ಸ್ ಸಿರಿಯನ್ ಚರ್ಚ್‌ಗಳ ಆದ್ರಾ ಚಾರಿಟೇಬಲ್ ಟ್ರಸ್ಟ್ ಬ್ರಹ್ಮಾವರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಯಾಕೋ ಮಾರ್ ಎಲಿಯಾಸ್ ಬಿಷಪ್‌ರವರಿಂದ ನೀಡಲ್ಪಟ್ಟ ತಲಾ 25 ಬ್ಯಾಗ್ ಮತ್ತು ಕೊಡೆಗಳನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆ.ಫಾ.ಸುನಿಲ್ ಪಿ. ಥಾಮಸ್‌ರವರು ವಿತರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ರಾಜು ಕೆ.ಎಸ್.,ಮುಖ್ಯ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.