ನಿಡ್ಪಳ್ಳಿ: ಸ್ವಚ್ಚ ಭಾರತ ಮಿಷನ್ (ಗ್ರಾಮೀಣ) ಕಾರ್ಯಕ್ರಮದಡಿಯಲ್ಲಿ ಒಂದು ತಿಂಗಳ ಕಾಲ ಸ್ವಚ್ಚ ಮೇವ ಜಯತೇ ಅಂದೋಲನ ನಡೆಯಲಿದ್ದು ಪಾಣಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪವಿತ್ರ ಹಾಗೂ ಎಲ್ಲಾ ಸದಸ್ಯರು, ಪಿಡಿಒ ಚಂದ್ರಮತಿ,ಕಿರಿಯ ಆರೋಗ್ಯ ಸಹಾಯಕಿ ಜ್ಯೋತಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು.