ಉಜಿರೆ :ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಸಾಹಿತ್ಯಕ / ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ನ.12 ರಂದು ಉಜಿರೆ ಪ. ಪೂ. ಕಾಲೇಜಿನಲ್ಲಿ ನಡೆಯಿತು.
ದೀಪ ಪ್ರಜ್ವಲನೆಯನ್ನು ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು. ದ. ಕ.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಸಿ. ಡಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿ ಭಾಗವಹಿಸಿ ಮಾತನಾದರು.ಕಾರ್ಯಕ್ರಮದಲ್ಲಿ
ಜಯಣ್ಣ ಸಿ.ಡಿ ರವರನ್ನು ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೋ. ಎನ್. ದಿನೇಶ್ ಚೌಟ, ಉಪನ್ಯಾಸ ಮಹಾವೀರ ಜೈನ್ ನಿರೂಪಿಸಿ ಉಪ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ವಂದಿಸಿದರು.
ವಿವಿಧ ಕಾಲೇಜುಗಳ ಸ್ಪರ್ಧಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.