Home_Page_Advt
Home_Page_Advt
Home_Page_Advt

ಬೆಟ್ಟಂಪಾಡಿ ನವೋದಯ ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಂಘಗಳ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಬೆಟ್ಟಂಪಾಡಿ: ನವೋದಯ ಪ್ರೌಢ ಶಾಲೆಯಲ್ಲಿ ಜೂ. 6 ರಂದು ಇಕೋ ಕ್ಲಬ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಮಂಜುಳಗಿರಿ ವೆಂಕಟ್ರಮಣ ಭಟ್‌ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಮಜಲುಗುಡ್ಡೆ ಶ್ಯಾಮ್ ಪ್ರಸಾದ್‌ರವರು ವಹಿಸಿ, ಪರಿಸರ ಸಂರಕ್ಷಣೆ ಮಹತ್ವವನ್ನು ತಿಳಿಸಿದರು.

ಮುಖ್ಯಗುರು ಮಾಲತಿ. ಬಿ ಪರಿಸರ ಸಂರಕ್ಷಣೆ ಮಹತ್ವವನ್ನು ತಿಳಿಸಿದರು. ಪರಿಸರ ದಿನಾಚರಣೆಯ ಅಂಗವಾಗಿ ಪರಿಸರಗೀತೆ, ಪ್ರಬಂಧ ಸ್ಪರ್ಧೆ, ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭಾಕಾರ್ಯಕ್ರಮದಲ್ಲಿ ಪುಷ್ಪಾವತಿ. ಎಸ್ ಸ್ವಾಗತಿಸಿ, ಪ್ರವೀಣ ಕುಮಾರಿ ವಂದಿಸಿದರು. ಇಕೋ ಕ್ಲಬ್ ಶಿಕ್ಷಕಿ ಭುವನೇಶ್ವರಿ. ಎಂ ಸ್ಪರ್ಧೆಗಳನ್ನು ನಡೆಸಿ, ಶೋಭಾ.ಬಿ ಕಾರ್ಯಕ್ರಮ ನಿರೂಪಿಸಿದರು.  ಸುಮಂಗಲಾ. ಕೆ ಸಹಕರಿಸಿದರು. ಪರಿಸರ ಸಂರಕ್ಷಣೆಯ ಪ್ರತಿಜ್ಞೆಯೊಂದಿಗೆ, ಪರಿಸರಜಾಥ, ಸ್ವಚ್ಚತಾ ಕಾರ್ಯಕ್ರಮ ಮತ್ತು ಗಿಡಗಳನ್ನು ನೆಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.