HomePage_Banner
HomePage_Banner
HomePage_Banner

ಜಿಡೆಕಲ್ಲು: ಮರದಿಂದ ಬಿದ್ದು ಗಾಯಗೊಂಡಿದ್ದ ಕೂಲಿ ಕಾರ್ಮಿಕ ಉಮ್ಮಣ್ಣ ಮಂಗಳೂರು ಆಸ್ಪತ್ರೆಯಲ್ಲಿ ಮೃತ್ಯು

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಹಲಸಿನ ಮರದಿಂದ ಬಿದ್ದು ಗಾಯಗೊಂಡಿದ್ದ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲಿನ ಕೂಲಿ ಕಾರ್ಮಿಕ ಮಂಗಳೂರು ಅಸ್ಪತ್ರೆಯಲ್ಲಿ ಜೂ.11ರಂದು ರಾತ್ರಿ ಮೃತಪಟ್ಟಿದ್ದಾರೆ.

ಜಿಡೆಕಲ್ಲು ನಿವಾಸಿ ಉಮ್ಮಣ್ಣ(50ವ)ರವರು ಮೃತಪಟ್ಟವರು. ಅವರು ಜೂ. 9ರಂದು ದರ್ಬೆ ಬೆಥನಿ ಶಾಲಾ ಬಳಿ ಹಲಸಿನ ಮರದಿಂದ ಹಲಸಿನ ಹಣ್ಣು ತೆಗೆಯಲು ಮರವೇರಿದ್ದರು. ಆಕಸ್ಮಿಕವಾಗಿ ಅವರು ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರು ಅಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಜೂ.11ರಂದು ರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ ಕಮಲ, ಇಬ್ಬರು ಪುತ್ರಿಯರು ಮತ್ತು ಪುತ್ರನನ್ನು ಅಗಲಿದ್ದಾರೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.