ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪೂರ್ವ ಸಿದ್ಧತಾ ಸಭೆ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ : ಆಗಮಿಸುವ ಭಕ್ತಾಧಿಗಳಿಗೆ ಸಕಲ ವ್ಯವಸ್ಥೆ ಮತ್ತು ಸುರಕ್ಷತೆ ಒದಗಿಸುವ ಸಲುವಾಗಿ ಮಹತ್ವದ ಸಭೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವವು ನ. 19 ರಿಂದ 23 ರವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಆಗಮಿಸುವ ಭಕ್ತರಿಗೆ ಸಕಲ ವ್ಯವಸ್ಥೆ ಹಾಗು ಸುರಕ್ಷತೆಗಾಗಿ ಪೂರ್ವಭಾವಿ ಸಿದ್ಧತಾ ಸಭೆ ನ.14 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಈ ಸಮಾಲೋಚನಾ ಸಭೆ ನಡೆಯಿತು. ಆರೋಗ್ಯ ಇಲಾಖೆ, ಕೆಎಸ್ ಆರ್ ಟಿಸಿ, ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಯಾವುದೇ ರೀತಿಯಲ್ಲೂ ಬರುವ ಭಕ್ತಾಧಿಗಳಿಗೆ ತೊಂದರೆ, ಲೋಪವಾಗದಂತೆ ಅದೇ ರೀತಿ ಎಲ್ಲಿಯೂ ವಾಹನ ದಟ್ಟಣೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಧರ್ಮಸ್ಥಳದ ಎ.ವಿ. ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here