ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.14ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಚರ್ಚ್ ನ ಪ್ರಧಾನ ಸೇವಕ ಜೋಯೆಲ್ ಪ್ರೀತಮ್ ರೇಗೋರವರು ವಿದ್ಯಾರ್ಥಿಗಳು ಶಾಲೆಯ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶುಭ ನುಡಿದರು.

ಶಾಲಾ ಸಂಚಾಲಕರಾದ ಅತಿ ವಂ ಫಾ ಜೋಸೆಫ್ ಕಾರ್ಡೋಜರವರು ಕಾರ್ಯಕ್ರಮಕ್ಕೆ ಶುಭ ಕೋರಿ ಆಶೀರ್ವದಿಸಿದರು. ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕ ವೃಂದದವರು ಹಾಡು, ನೃತ್ಯಗಳ ಮೂಲಕ ಎಲ್ಲರನ್ನೂ, ಮನರಂಜಿಸಿದರು. ಮಕ್ಕಳು ಎಳವೆಯಲ್ಲಿಯೇ ಅರಿಯಬೇಕಾದ ಜೀವನ ಮೌಲ್ಯಗಳನ್ನು ಮೂಕಾಭಿನಯದ ಮೂಲಕ ತಿಳಿಸಿದರು. ಸಾಮಾಜಿಕ ಜಾಲತಾಣ ಹಾಗೂ ದುಶ್ಚಟಗಳಿಂದಾಗುವ ಪರಿಣಾಮದ ಕುರಿತು ಜಾಗೃತಿ ಮೂಡಿಸಲು ಎಸ್ ಎಮ್ ಎಸ್ ಕಿರುಚಿತ್ರವನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಪೌಲಿನ್ ರೆಗೋ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಬೊನವೆಂಚರ್ ಪಿಂಟೋ ಮತ್ತು ಜೊತೆ ಕಾರ್ಯದರ್ಶಿ ಶ್ರೀಮತಿ ವಿಲ್ಮಾ ರೇಗೊ ಉಪಸ್ಥಿತರಿದ್ದರು.

ಸಹಶಿಕ್ಷಕಿಯರಾದ ಶ್ರೀಮತಿ ಮೇರಿ ಸುಜಾ ಸ್ವಾಗತಿಸಿ, ಅಖೀದಾ ಬಾನು ವಂದಿಸಿದರು. ಶಾಂತಿ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here