ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ನೆಹರೂರವರ ಜನ್ಮ ದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲಾ ನಾಯಕಿ ಕು ಸಅದ ಮರಿಯಂ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಕ್ರಮದಲ್ಲಿ ಕುವೆಟ್ಟು ಗ್ರಾಪಂ ಅಧ್ಯಕ್ಷೆ ಆಶಾಲತಾ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉಪಾಧ್ಯಕ್ಷೆ ಜಾನಕಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬಿ ಶೆಟ್ಟಿ ಪೆರಂಗೋಡಿ, ಮುಖ್ಯೋಪಾಧ್ಯಾಯರಾದ ಭಾಸ್ಕರ , ಆಶಾ ಕಾರ್ಯಕರ್ತೆ ಜಯಂತಿ ಹಾಗೂ ಅಧ್ಯಾಪಕ ವೃಂದದವರು ಪೋಷಕರು ಮಕ್ಕಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.