ಪುದುವೆಟ್ಟು: ಪುದುವೆಟ್ಟು ಗ್ರಾಮದ ಗೊಂಕ್ರಾರಿನಲ್ಲಿ ನ.14ರಂದು ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಆಕಾರದ ಮರ ಹಾಗೂ ಕರೆಂಟ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಅವರು ತಮ್ಮ ಯುವ ಪಡೆಯೊಂದಿಗೆ ಅದನ್ನು ತೆರವು ಕಾರ್ಯಾಚರಣೆ ಮಾಡಿ ರಾತ್ರೊ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಹಾಗೂ ತಕ್ಷಣ ಸ್ಪಂದಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.