HomePage_Banner
HomePage_Banner
HomePage_Banner

ಇನ್ನು ನಾಲ್ಕನೇ ಶನಿವಾರವೂ ‘ಸರಕಾರಿ ರಜೆ’

Puttur_Advt_NewsUnder_1
Puttur_Advt_NewsUnder_1

ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಸರಕಾರಿ ಉದ್ಯೋಗಿಗಳಿಗೆ ತಕ್ಷಣದಿಂದಲೆ ಜಾರಿಗೆ ಬರುವಂತೆ 4ನೇ ಶನಿವಾರವೂ ಸರಕಾರಿ ರಜೆ ಘೋಷಿಸಿ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪ್ರತಿ ತಿಂಗಳ 4ನೇ ಶನಿವಾರ ಸಾರ್ವತ್ರಿಕ ರಜೆ ಹಾಗೂ ರಾಜ್ಯ ಸರಕಾರಿ ನೌಕರರಿಗೆ ಇದ್ದ ಹದಿನೈದು ದಿನಗಳ ಸಾಂದರ್ಭಿಕ ರಜೆಯನ್ನು ಹತ್ತು ದಿನಗಳಿಗೆ ಇಳಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಜೂ.6ರಂದು ನಡೆದ ಸಂಪುಟ ಸಭೆಯಲ್ಲಿ ರಜೆ ನಿರ್ಧಾರ ಕೈಗೊಳ್ಳಲಾಗಿತ್ತು. ಅಲ್ಲದೆ, ವಿವಿಧ ಜಯಂತಿಗಳ ರಜೆ ಕಡಿತಗೊಳಿಸಿ 4ನೆ ಶನಿವಾರ ರಜೆ ನೀಡಲು 6ನೆ ವೇತನ ಆಯೋಗದ ಶಿಫಾರಸಿನಲ್ಲಿ ತಿಳಿಸಲಾಗಿತ್ತು. ಈ ಕುರಿತು ಕೃಷ್ಣ ಬೈರೇಗೌಡ ನೇತೃತ್ವದ ಸಂಪುಟ ಉಪ ಸಮಿತಿ ವರದಿ ನೀಡಿತ್ತು. ಆದರೆ ಸದ್ಯಕ್ಕೆ ಯಾವುದೇ ಜಯಂತಿಯ ರಜೆ ಕಡಿತಗೊಳಿಸದಿರಲು ಸರಕಾರ ತೀರ್ಮಾನಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.