ವಿಟ್ಲ: ವಿಟ್ಲದ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ೮ ನೇ ತರಗತಿಯಿಂದ ಸಂಸ್ಕೃತವನ್ನು ತೃತೀಯ ಭಾಷೆಯಾಗಿ ಕಲಿಯಲು ಅವಕಾಶ ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ವಿಠಲ ಪ್ರೌಢ ಶಾಲೆಯ ನಿವೃತ್ತ ಅಧ್ಯಾಪಕ ಕೃಷ್ಣ ಭಟ್ ನೆರವೇರಿಸಿದರು. ಶಾಲಾ ಪ್ರಾಂಶುಪಾಲ ಜಯರಾಮ ರೈ, ಉಪಪ್ರಾಂಶುಪಾಲೆ ಶಾಲಿನಿ ನೋಂಡಾ, ಆಡಳಿತಾಧಿಕಾರಿ ರಾಧಾಕೃಷ್ಣ ಉಪಸ್ಥಿತರಿದ್ದರು. ಶಿಕ್ಷಕಿ ಸೀಮಾ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅನನ್ಯ, ಕಿರಣ ಶ್ರೀ, ಸ್ನೇಹ ಭಾರತಿ, ಅನುಷಾ ಪ್ರಾರ್ಥಿಸಿದರು. ಶಿಕ್ಷಕಿ ಸವಿತಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.