ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಕೆ ಡಿ ಆರ್ ಡಿ ಪಿ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಮಂಜುನಾಥ್ ರವರಿಗೆ ಸನ್ಮಾನ

0


ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ. ಜಿಲ್ಲೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಹಾಗೂ ಬೆಳ್ತಂಗಡಿ – ಗುರುವಾಯನಕೆರೆ ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಲ್. ಎಚ್. ಮಂಜುನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನ.16 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು.

ಸಹಕಾರ ರತ್ನ ಪ್ರಶಸ್ತಿ ಪಡೆದ ಜನಜಾಗೃತಿ ವೇದಿಕೆ ಪುತ್ತೂರಿನ ನಿಕಟಪೂರ್ವ ಅಧ್ಯಕ್ಷ ದಂಬೆಕಾನ ಸದಾಶಿವ ರೈ ಅವರನ್ನು ಗೌರವಿಸಲಾಯಿತು.

ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ಶಾರದ ರೈ, ಬಂಟ್ಬಾಳದ ಅಧ್ಯಕ್ಷ ರೋನಾಲ್ಡ್ ಡಿಸೋಜ, ಪುತ್ತೂರಿನ ಅಧ್ಯಕ್ಷ ಮಹಾಬಲ ರೈ, ಮಂಗಳೂರಿನ ಅಧ್ಯಕ್ಷ ಮಹಾಬಲ ಚೌಟ, ಕಾಸರಗೋಡು ಜಿಲ್ಲೆಯ ಅಧ್ಯಕ್ಷ ಅಶ್ವಥ್ ಪೂಜಾರಿ, ಸುಳ್ಯದ ಅಧ್ಯಕ್ಷ ವಿಶ್ವನಾಥ್ ರೈ, ಪ್ರಗತಿಬಂಧು ಬೆಳ್ತಂಗಡಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ, ಪ್ರಗತಿಬಂಧು ಗುರುವಾಯನಕೆರೆ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾಶಿವ ಬಂಗೇರ, ಉಡುಪಿ ಜಿಲ್ಲಾ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ಶೌರ್ಯ ಶ್ರೀ ವಿಪತ್ತು ನಿರ್ವಹಣದ ಶ್ರೀಕಾಂತ್ ಪಟವರ್ಧನ್ ಹಾಗೂ ಪ್ರಕಾಶ್ ಧರ್ಮಸ್ಥಳ ಮೊದಲಾದವರು ಉಪಸ್ಥಿತರಿದ್ದರು.ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಿಸ್ ಸನ್ಮಾನ ಪತ್ರ ವಾಚಿಸಿದರು. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.ಇನ್ನೊರ್ವ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ವಂದಿಸಿದರು ಯೋಜನಾಧಿಕಾರಿಗಳಾದ ಸುರೇಂದ್ರ ಮತ್ತು ಯಶವಂತ ನಿರೂಪಿಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರುಗಳು, ವಲಯ ನಿರ್ದೇಶಕರು, ಗ್ರಾಮಭಿವೃದ್ಧಿ ಯೋಜನೆ, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು, ಶೌರ್ಯ ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here