ವಿಶ್ವ ರಕ್ತದಾನಿಗಳ ದಿನ: ರಕ್ತದಾನ ಮಾಡಿ… ಜೀವ ಉಳಿಸಿ

ಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು, ಸ್ವಯಂ ಪ್ರೇರಿತನಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ ರಕ್ತದಾನ ಎನ್ನುವರು.

ರಕ್ತಕ್ಕೆ ವರ್ಷವಿಡೀ ನಿರಂತರವಾಗಿ ಬೇಡಿಕೆ ಇರುತ್ತದೆ. ಏಕೆಂದರೆ ಅಪಘಾತಗಳು, ತುರ್ತು ಚಿಕಿತ್ಸೆ ಸಂದರ್ಭಗಳು ಬರುತ್ತಲೇ ಇರುತ್ತವೆ. ಜೊತೆಯಲ್ಲಿ ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು, ಥ್ಯಾಲಸೀಮಿಯ, ಹಿಮೋಫೀಲಿಯ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ. ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ ೩೫ ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. ೩೫ ದಿನಗಳ ನಂತರ ಅದು ಉಪಯೋಗಕ್ಕೆ ಬರುವುದಿಲ್ಲ. ಆದ್ದರಿಂದ ಜನತೆ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಆವಶ್ಯಕತೆ ಇರುವವರಿಗೆ, ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ.

ರಕ್ತವನ್ನು ನೀಡಿ ಇನ್ನೊಬ್ಬರ ಜೀವವನ್ನು ಉಳಿಸುವುದರೊಂದಿಗೆ ತಮ್ಮ ದೇಹದಲ್ಲಿ ಇರುವ ರಕ್ತದ ಗುಂಪು ಯಾವುದು ಎಂದು ತಿಳಿದುಕೊಳ್ಳುವುದು ಅಷ್ಟೆ ಮುಖ್ಯವಾಗಿರುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ರಕ್ತದ ಅನಿವಾರ್ಯತೆ ಎದುರಾದಲ್ಲಿ ರಕ್ತದ ಗುಂಪಿನ ಮಾಹಿತಿ ತಿಳಿದಿರುವುದು ಅವಶ್ಯಕವಾಗಿರುತ್ತದೆ.

ರಕ್ತದ ಮಹತ್ವ:
* ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. * ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. * ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು. * ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ. * ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ ೨೪ ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ. * ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಆಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತದೆ. * ರಕ್ತದಾನ ಮಾಡುವಾಗ ಒಂದು ಚುಚ್ಚುಮದ್ದು ತೆಗೆದುಕೊಳ್ಳುವಾಗ ಆಗುವುದಕ್ಕಿಂತ ಹೆಚ್ಚು ನೋವು ಆಗುವುದಿಲ್ಲ. * ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು ಒಟ್ಟು ೨೦ ನಿಮಿಷಕ್ಕಿಂತ ಹೆಚ್ಚಿನ ಸಮಯ ಬೇಕಾಗಿಲ್ಲ.

ಯಾರು ರಕ್ತದಾನ ಮಾಡಬಹುದು..?
* ಹೆಣ್ಣು ಗಂಡೆಂಬ ಬೇಧವಿಲ್ಲದೇ ೧೮ ರಿಂದ ೬೦ ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. * ಗಂಡಸರು ೩ ತಿಂಗಳಿಗೊಮ್ಮೆ ಮತ್ತು ಹೆಂಗಸರು ೪ ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. * ದಾನಿಯ ದೇಹದ ತೂಕ ೪೫ ಕೆ.ಜಿ ಗಿಂತ ಹೆಚ್ಚಿರಬೇಕು. * ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ೧೨.೫ ಗ್ರಾಂ ಗಿಂತ ಹೆಚ್ಚಿರಬೇಕು.

ಯಾರು ರಕ್ತದಾನ ಮಾಡಬಾರದು..?
* ಯಾವುದಾದರೂ ಕಾಯಿಲೆಯಿಂದ ನರಳುತ್ತಿದ್ದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿದ್ದರೆ ರಕ್ತದಾನ ಮಾಡಬಾರದು. * ಮದ್ಯಪಾನ ಹಾಗೂ ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು. * ಮಹಿಳೆಯರು, ತಿಂಗಳ ಮುಟ್ಟಿನ ಸಮಯದಲ್ಲಿ ಗರ್ಭಿಣಿಯರಾಗಿದ್ದಾಗ, ಎದೆ ಹಾಲುಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ ೬ ತಿಂಗಳು ರಕ್ತದಾನ ಮಾಡಬಾರದು. * ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ ಅಂತಹವರು ಲಸಿಕೆ ಪಡೆದ ೪ ವಾರಗಳವರೆಗೆ ರಕ್ತದಾನ ಮಾಡಬಾರದು. * ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ ಚಿಕಿತ್ಸೆ ಪಡೆದ ನಂತರದ ಮೂರು ತಿಂಗಳು ರಕ್ತದಾನ ಮಾಡಬಾರದು.

* ಆಸ್ಪರಿನ್ ಸೇವಿಸಿದ್ದರೆ, ಅಂತಹ ವ್ಯಕ್ತಿ ಮಾತ್ರೆ ಸೇವಿಸಿದ ನಂತರ ಮೂರು ದಿನ ರಕ್ತದಾನ ಮಾಡಬಾರದು. * ಹಿಂದಿನ ೩ ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು. * ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ ೬ ತಿಂಗಳವರೆಗೆ ಮತ್ತು ಚಿಕ್ಕ ಪ್ರಮಾಣದ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ ೩ ತಿಂಗಳವರೆಗೆ ರಕ್ತದಾನ ಮಾಡಬಾರದು. * ಕಾಮಾಲೆ, ಹೆಚ್.ಐ.ವಿ ಲೈಂಗಿಕ ರೋಗವಿರುವವರು ರಕ್ತದಾನ ಮಾಡಬಾರದು * ಕ್ಯಾನ್ಸರ್, ಹೃದಯದ ಕಾಯಿಲೆ, ಅಸಹಜ ರಕ್ತಸ್ರಾವ, ಕಾರಣವಿಲ್ಲದೆ ತೂಕ ಕಡಿಮೆಯಾಗುವುದು, ಮಧುಮೇಹ, ಹೈಪಟೈಟಿಸ್ `ಬಿ’ ಮತ್ತು `ಸಿ’, ಮೂತ್ರಪಿಂಡ ಸಂಬಂಧ ಕಾಯಿಲೆ ಹಾಗೂ ಲಿವರ್ ಗೆ ಸಂಬಂಧಿಸಿದ ಕಾಯಿಲೆಯಿರುವ ವ್ಯಕ್ತಿ ರಕ್ತದಾನ ಮಾಡಬಾರದು.

-ಲೇಖನ: ರಝಾಕ್ ಸಾಲ್ಮರ

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.