ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಘೋತ್ಸವ

0

ಬೆಳ್ತಂಗಡಿ:ಮಹಿಳಾ ಸ್ವ-ಸಹಾಯ ಸಂಘಗಳ ಮೂಲಕ ಮಹಿಳೆಯರ ಬಲವರ್ಧನೆ ಆಗಿ, ಸಮಾಜಕ್ಕೆ ಅವರು ಪೂರಕ ಶಕ್ತಿಯಾಗಿ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಪಾತ್ರ ಮಹತ್ತರ ಎಂದು ಕುಟ್ರುಪಾಡಿ ಸಂತ ಮೇರೀಸ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂದನೀಯ ಫಾ. ವಿಲಿಯಂ ಅಭಿಪ್ರಾಯಪಟ್ಟರು.

ಅವರು ನ. 16 ರಂದು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಕಡಬ ಹಾಗೂ ಜೀವಜ್ಯೋತಿ ಮಹಾ ಸಂಘ ಕುಟ್ರುಪಾಡಿ ಇವುಗಳ ಸಹಭಾಗಿತ್ವದಲ್ಲಿ ಕುಟ್ರುಪಾಡಿ ಸಂತ ಮೇರೀಸ್ ಚರ್ಚ್ ಸಭಾಭವನದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಿದ ಸಂಘೋತ್ಸವ- 2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವನೆಗೈದು ಸಂಘೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ ಉದ್ದೇಶದ ಬಗ್ಗೆ ವಿವರಿಸಿ ಎಲ್ಲರನ್ನು ಸ್ವಾಗತಿಸಿದರು. ಕುಟ್ರುಪಾಡಿ ಜೀವಜ್ಯೋತಿ ಮಹಾ ಸಂಘದ ಅಧ್ಯಕ್ಷರಾದ ಶ್ರೀಮತಿ ಲಿಸ್ಸಿ ಮ್ಯಾಥ್ಯೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಹೊರಾಂಗಣ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟ್ರುಪಾಡಿ ಸಂತ ಮೇರೀಸ್ ಚರ್ಚಿನ ಧರ್ಮಗುರುಗಳು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ಗಮಿತ ನಿರ್ದೇಶಕರಾದ ವಂದನೀಯ ಫಾದರ್ ಜೋಸ್ ಆಯಾಂಕುಡಿರವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕುಟ್ರುಪಾಡಿ ಸಿ.ಎಮ್.ಸಿ ಕಾನ್ವೆಂಟಿನ ಸುಪೀರಿಯರ್ ಆದ ಸಿಸ್ಟರ್ ಲತಾ, ಕಡಬ ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಇದರ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವಲ್ಸಮ್ಮ ಎ.ಜೆ., ಸ್ನೇಹ ಕಿರಣ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್ ಹಾಗೂ ಕಿರಣ್ ಒಕ್ಕೂಟದ ಕೋಶಾಧಿಕಾರಿಯಾದ ಶ್ರೀಮತಿ ಶೈಲಾ ಜೋಸೆಫ್ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ ಎಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕಿಯಾದ ಶ್ರೀಮತಿ ಸಿಸಿಲಿಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here