Home_Page_Advt
Home_Page_Advt
Home_Page_Advt

ಸೇಡಿಯಾಪು ಅನಿಲಕೋಡಿ ಉಭಯ ಪಂಚಾಯತ್‌ಗಳಿಂದ ಕಾರ್ಯಾಚರಣೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೋಡಿಂಬಾಡಿ ಮತ್ತು ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಅನಿಲಕೋಡಿ ರಸ್ತೆಯ ಅವ್ಯವಸ್ಥೆಯ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಬೆನ್ನಲ್ಲೇ ಜೂ.14ರಂದು ಕೋಡಿಂಬಾಡಿ ಮತ್ತು ಬನ್ನೂರು ಗ್ರಾಮ ಪಂಚಾಯತ್ ವತಿಯಿಂದ ರಸ್ತೆಯ ಇಕ್ಕೆಲಗಳಲ್ಲಿ ಜೆಸಿಬಿ ಮೂಲಕ ಚರಂಡಿಗಳ ನಿರ್ಮಾಣ ಮತ್ತು ಅಕ್ರಮ ರಚನೆಗಳ ತೆರವು ಕಾರ್ಯವನ್ನು ನಡೆಸಿದರು.

ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರಥಮ ಮಳೆಗೆ ಈ ರಸ್ತೆ ಕೆಸರು ಗದ್ದೆಯಂತಾಗಿತ್ತು. ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಹೊತ್ತು ರಸ್ತೆ ತಡೆ ಮಾಡಿದ್ದರು. ಜೂ.14ರಂದು ಎರಡೂ ಗ್ರಾಮ ಪಂಚಾಯತ್‌ಗಳು ಆಯಾ ವ್ಯಾಪ್ತಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಯಿತು. ರಸ್ತೆಯ ಇಕ್ಕೆಡೆಗಳಲ್ಲೂ ಚರಂಡಿ ನಿರ್ಮಿಸಿ ನೀರು ಹರಿದು ಹೋಗಲು ಅಡ್ಡಿಯಾಗುವ ಅಕ್ರಮ ರಚನೆಗಳನ್ನು ತೆರವುಗೊಳಿಸಿದರು.

ರಸ್ತೆ ಅವ್ಯವಸ್ಥೆಯ ಬಗ್ಗೆ ಗ್ರಾಮ ಪಂಚಾಯತ್‌ಗಳ ವತಿಯಿಂದ ಯಾವುದೇ ರೀತಿಯ ಪರಿಹಾರ ಕಾರ್ಯ ನಡೆಯದಿದ್ದರೆ ಜೂ.೧೫ರಂದು ರಸ್ತೆ ಬಂದ್ ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.