Home_Page_Advt
Home_Page_Advt
Home_Page_Advt

ಕಡಬ ತಾಲೂಕು ಪ್ರಾಕೃತಿಕ ವಿಕೋಪ- ನೆರೆ ಮುಂಜಾಗ್ರತಾ ಸಭೆ


ಆಯಾ ಗ್ರಾಮದ ಪ್ರಾಕೃತಿಕ ವಿಕೋಪ ಮುನ್ಸೂಚನೆಯ ಮಾಹಿತಿ ಒಪ್ಪಿಸಲು ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚನೆ

ಕಡಬ: ಕಡಬ ತಾಲೂಕು ಮಟ್ಟದ ಪ್ರಾಕೃತಿಕ ವಿಕೋಪ, ನೆರೆ ಮುಂಜಾಗ್ರತಾ ಸಭೆಯು ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್‌ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಜೂ.14ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ತಹಸೀಲ್ದಾರ್ ಜಾನ್ ಪ್ರಕಾಶ್‌ರವರು, ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ, ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮಕರಣಿಕರುಗಳು ತಮ್ಮ ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪ ನಡೆಯುವ ಬಗ್ಗೆ ಮುನ್ಸೂಚನೆ ಇದ್ದರೆ ಅದರ ಬಗ್ಗೆ ವಾರದೊಳಗೆ ವರದಿ ನೀಡಬೇಕು, ಪ್ರಾಕೃತಿಕ ವಿಕೋಪ ಹಾಗೂ ನೆರೆಯ ಸಂದರ್ಭಗಳಲ್ಲಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬಂದಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯಾಚರಣೆ ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಡಬ ತಹಶೀಲ್ದಾರ್ ಜಾನ್‌ಪ್ರಕಾಶ್ ರೋಡ್ರಿಗಸ್ ಅವರು ಹೇಳಿದರು.

ಈಗಾಗಲೇ ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ದಿನದ 24 ಗಂಟೆಯೂ ಇಲ್ಲಿ ಕಂದಾಯ ಇಲಾಖಾ ಸಿಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ಯಾವುದೇ ರೀತಿಯ ನೆರವಿನ ಅಗತ್ಯವಿದ್ದಲ್ಲಿ ಕಡಬ ತಹಶೀಲ್ದಾರ್ ಕಚೇರಿಯಲ್ಲಿ ತರೆಯಲಾಗಿರುವ ಪ್ರಾಕೃತಿಕ ವಿಕೋಪ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದರು. ಆಯಾಯ ಗ್ರಾಮ ಪಂಚಾಯತ್‌ಗಳಿಗೆ ಅವರ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಸಮರ್ಪಕ ಮಾಹಿತಿಗಳು ಇರುವುದರಿಂದ ಅಲ್ಲಿನ ಗ್ರಾಮಕರಣಿಕರು ಹಾಗೂ ಪಂಚಾಯತ್ ಆಡಳಿತ ಜಂಟಿಯಾಗಿ ಸಭೆ ನಡೆಸಿ ವಾರದೊಳಗೆ ಈ ಕುರಿತು ವರದಿ ನೀಡುವಂತೆ ಅವರು ಸೂಚಿಸಿದರು.

ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಅವರು ಮಾತನಾಡಿ ಮುಖ್ಯವಾಗಿ ಶಾಲಾ ಮಕ್ಕಳು ದಾಟುವ ಹಳ್ಳ, ತೊರೆ ಮುಂತಾದ ಜಾಗಗಳಲ್ಲಿ ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ ಕಂದಾಯ ಇಲಾಖೆ ಮತ್ತು ಸ್ಥಳೀಯ ಪಂಚಾಯತ್‌ಗಳು ಸೇರಿ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಜಾಗರೂಕತೆ ವಹಿಸುವ ಅಗತ್ಯವಿದೆ. ರಸ್ತೆಯ ಬದಿಯಲ್ಲಿ ಹಾಗೂ ವಾಸದ ಮನೆಗಳ ಪಕ್ಕ ಇರುವ ಅಪಾಯಕಾರಿ ಮರಗಳ ತೆರವು, ಕುಸಿದು ಬೀಳುವ ಸ್ಥಿತಿಯಲ್ಲಿರುವ ಮನೆಗಳ ದುರಸ್ತಿ, ಗ್ರಾಮೀಣ ಕಚ್ಛಾ ರಸ್ತೆಗಳ ದುರಸ್ತಿಯ ಬಗ್ಗೆ ಗಮನಹರಿಸಬೇಕಿದೆ ಎಂದರು.

ಕಡಬ ತಾಲೂಕು ಪ್ರಾಕೃತಿಕ ವಿಕೋಪ ನಿಯಂತ್ರಣ ನೋಡಲ್ ಅಧಿಕಾರಿ, ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯೇಂದ್ರ ಸಾಲಿಯಾನ್ ಅವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್, ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್, ಕಡಬ ಉಪ ವಲಯ ಅರಣ್ಯಾಧಿಕಾರಿ ಸಂತೋಷ್‌ಕುಮಾರ್ ರೈ, ಉಪ ತಹಸೀಲ್ದಾರ್ ನವ್ಯ ಅವರು ತಮ್ಮ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿ ನೀಡಿದರು. ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ, ಗೃಹರಕ್ಷಕ ದಳ, ಗ್ರಾ.ಪಂ. ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖಾ ಅಧಿಕಾರಿಗಳು ಮತ್ತು ಸಿಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ಅವರು ಸ್ವಾಗತಿಸಿ, ನಿರೂಪಿಸಿದರು. ಕಡಬ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಅವರು ವಂದಿಸಿದರು.

ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಿ:
ಪ್ರಾಕೃತಿಕ ವಿಕೋಪ ಹಾಗೂ ನೆರೆಯ ಸಂದರ್ಭಗಳಲ್ಲಿ ತುರ್ತು ನೆರವಿನ ಅಗತ್ಯವಿದ್ದವರು
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿನ ಪ್ರಾಕೃತಿಕ ವಿಕೋಪ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ-1077 ಕಚೇರಿ-0824-2220590, 2220584,ಪುತ್ತೂರು ಸಹಾಯಕ ಕಮೀಶನರ್ ಕಚೇರಿ-08251-230357, ಮನೆ-230492 ಹಾಗೂ ಕಡಬ ತಹಶೀಲ್ದಾರ್ ಕಚೇರಿಯಲ್ಲಿ ತೆರೆಯಲಾಗಿರುವ ಪ್ರಾಕೃತಿಕ ವಿಕೋಪ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08251-260425 ನ್ನು ಸಂಪರ್ಕಿಸಬಹುದಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.