ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವಭಾವಿ ಸಭೆ:ಮೂಲಭೂತ ಸೌಕರ್ಯಕ್ಕೆ ತೊಂದರೆಯಾಗದಂತೆ ಗ್ರಾ. ಪ. ಅಧ್ಯಕ್ಷರಿಂದ ಅಧಿಕಾರಿಗಳಿಗೆ ಸೂಚನೆ

0

ಧರ್ಮಸ್ಥಳ:  ಸ್ಥಳೀಯ ಆಡಳಿತ ಗ್ರಾಮ ಪಂಚಾಯತು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷ ದೀಪೋತ್ಸವ ನವಂಬರ್ 19 ರಿಂದ 23 ರ ತನಕ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ  ಜಯ ಮೋನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಲಕ್ಷದೀಪೋತ್ಸವದ ಸಂದರ್ಭದಲ್ಲಿ ಯಾವುದೇ ಮೂಲಭೂತ ಸೌಕರ್ಯಕ್ಕೆ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾವಿರಾರು ಜನ ಆಗಮಿಸುವ ಸಂದರ್ಭದಲ್ಲಿ ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸು ವ್ಯವಸ್ಥೆ, ಹೋಂ ಗಾರ್ಡ್ ಸಿಬ್ಬಂದಿ, ಕೆಲವೊಂದು ರಸ್ತೆಗಳಲ್ಲಿ ಬ್ಯಾರಿಗೇಟ್ ಮೂಲಕ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ವ್ಯವಸ್ಥೆ, ಜನಸಂದನಿ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ರಸ್ತೆಗಳ ಬೋರ್ಡು ಬೆಂಗಳೂರು ಮಂಗಳೂರು ರಾಜ್ಯ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮವಹಿಸುವುದು, ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟಂತೆ ಹೆಚ್ಚುವರಿ ವಿದ್ಯುತ್ ಪೂರೈಕೆ, ಬೇರೆ ಬೇರೆ ಕಡೆಗಳಿಂದ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ ಬಗ್ಗೆ ಕ್ರಮ ಕೈಗೊಳ್ಳುವುದು, ಸಾರಿಗೆ ವ್ಯವಸ್ಥೆಗೆ ಸಂಬಂಧಪಟ್ಟಂತೆ ಎಲ್ಲಾ ಕಡೆಗಳಿಗೆ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸುವುದು, ಬೆಂಗಳೂರು ಮೈಸೂರಿನಿಂದ ಬರುವ ಬಸ್ಸುಗಳನ್ನು ಕಲ್ಲೇರಿಯ ಒಳಮಾರ್ಗವಾಗಿ ಬಸ್ ಸ್ಟ್ಯಾಂಡ್ ಅನ್ನು ತಲುಪಿಸುವ ವ್ಯವಸ್ಥೆ, ರಸ್ತೆಗಳಲ್ಲಿ ಬಸ್ಸುಗಳನ್ನು ನಿಲ್ಲಿಸದಂತೆ ಕ್ರಮವಹಿಸುವುದು, ಹಾಗೂ ರಾತ್ರಿ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ಸನ್ನು ನಿಲ್ಲಿಸುವ ವ್ಯವಸ್ಥೆಯನ್ನು ಮಾಡುವುದು, ಆರೋಗ್ಯ ಇಲಾಖೆಗೆ ಸಂಬಂಧಪಟ್ಟಂತೆ ಸ್ವಚ್ಛತೆಯನ್ನು ಕಾಪಾಡುವುದು, ತುರ್ತು ಅಂಬುಲೆನ್ಸ್ ಗಳ ವ್ಯವಸ್ಥೆ, ಸಾರ್ವಜನಿಕ ಸ್ಥಳಗಳಲ್ಲಿ ಫಾಗಿಂಗ್ ಮಾಡುವುದು, ಜಾತ್ರಾ ಅಂಗಡಿಗಳಲ್ಲಿ ಆಹಾರ ಹಾಗೂ ತಿಂಡಿ ತಿನಸುಗಳನ್ನು ತೆರೆದಿಡದಂತೆ ಕ್ರಮ ಕೈಗೊಳ್ಳುವುದು, ಧರ್ಮಸ್ಥಳ ಮಾಹಿತಿ ಕಚೇರಿ ಸಿಬ್ಬಂದಿಗಳ ತಂಡದೊಂದಿಗೆ ಸಂಪರ್ಕದಲ್ಲಿದ್ದು ಯಾವುದೇ ರೀತಿಯ ಮೂಲಭೂತ ಸೌಕರ್ಯಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸಳ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ  ಪಿ ಶ್ರೀನಿವಾಸ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಉಮೇಶ್ ಕೆ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ ಮುರಳೀಧರ ದಾಸ್, ಶ್ರೀ ಹರ್ಷಿತ್ ಜೈನ್,ಶ್ರೀ ಹರೀಶ್ ಸುವರ್ಣ, ಶ್ರೀ ದಿನೇಶ್ ರಾವ್, ಶ್ರೀರಾಮಚಂದ್ರ ರಾವ್, ಶ್ರೀಮತಿ ವಿಮಲಾ, ಶ್ರೀಮತಿ ಶರ್ಮಿಳ, ಮೆಸ್ಕಾಂ ಅಧಿಕಾರಿ ಶ್ರೀ ಸುಹಾಸ್, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಶ್ರೀ ಉದಯಶೆಟ್ಟಿ, ಪೊಲೀಸ್ ಅಧಿಕಾರಿಗಳಾದ ಶ್ರೀ ಕೃಷ್ಣಪ್ಪ ಶ್ರೀ ಪ್ರಶಾಂತ್, ವೈದ್ಯಾಧಿಕಾರಿ ಡಾ. ಮಂಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲಲಿತಾ, ಇತರ ಇಲಾಖಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು, ಡಾ. ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here