ಬೆಳ್ತಂಗಡಿ : ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ದರ್ಬೆ, ಪುತ್ತೂರಿನಲ್ಲಿ ನವೆಂಬರ್ 17ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಎಂಬ ಸ್ಪರ್ಧಾತ್ಮಕ ಕಾರ್ಯಕ್ರಮದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರಾದ ಲೂಹ ಮರಿಯಮ್ (10ನೇ) ಹಾಗೂ ಫಾತಿಮತ್ ಜಸೀರಾ(10ನೇ) ಇವರು ಭಾಗಿಯಾಗಿ ಕೊಲಾಜ್ ತಯಾರಿಕೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.