Home_Page_Advt
Home_Page_Advt
Home_Page_Advt

ಜೂ.16: ಪುತ್ತೂರು ಶಿವಳ್ಳಿ ಸಂಪದ 24ನೇ ಮಹಾಸಭೆ, ಪ್ರತಿಭಾ ಪುರಸ್ಕಾರ, ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಿವಳ್ಳಿ ಸಂಪದ ಪುತ್ತೂರು ಇದರ 24ನೇ ವಾರ್ಷಿಕ ಮಹಾಸಭೆಯು ಜೂ. 16 ರಂದು ಕೆಮ್ಮಿಂಜೆ ಷಣ್ಮುಖ-ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಮಹಿಳಾ ಸದಸ್ಯರಿಂದ ಲಕ್ಷ್ಮೀಶೋಭಾನೆ ಮತ್ತು ವಿಷ್ಣು ಸಹಸ್ರನಾಮ ಪಾರಾಯಣ, ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಧಾರ್ಮಿಕ ಪ್ರವಚನ ನಡೆಯಲಿದೆ.  ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ವಿಜ್ಞಾನಿ ಡಾ| ಯದುಕುಮಾರ್, ವೈದಿಕ ವಿದ್ವಾಂಸ ವೇ.ಮೂ. ಶ್ರೀವತ್ಸ ಕೆದಿಲಾಯ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ| ಸುಬ್ರಹ್ಮಣ್ಯ ಎಡಪಡಿತ್ತಾಯರವರಿಗೆ ಸನ್ಮಾನ ಜರಗಲಿದೆ. ನಂತರ ಸಂಪದದ ಮಹಾಸಭೆ ನಡೆಯಲಿದೆ ಎಂದು ಶಿವಳ್ಳಿ ಸಂಪದ ಅಧ್ಯಕ್ಷ ಹರೀಶ್ ಪುತ್ತೂರಾಯ, ಗೌರವಾಧ್ಯಕ್ಷ ಎನ್. ಸುಬ್ರಹ್ಮಣ್ಯಂ ಮತ್ತು ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.