Home_Page_Advt
Home_Page_Advt
Home_Page_Advt

ಮುಂಡೂರು: ಹಾಲು ಉತ್ಪಾದಕರ ಸಹಕಾರ ಸಂಘದಿಂದ ವಿದ್ಯಾರ್ಥಿಗಳಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ಮುಂಡೂರು ಹಾಲು ಸೊಸೈಟಿ ವಠಾರದಲ್ಲಿ ನಡೆಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಸಿಂಚನಲಕ್ಷ್ಮೀ, ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ನಿಖಿತ, ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟದಲ್ಲಿ ಮಿಂಚಿದ ಬಿಂದುರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸುರೇಶ್ ಕಣ್ಣರಾಯರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕೆ.ಎಂ.ಎಫ್ ಉಪವ್ಯವಸ್ಥಾಪಕ ರಾಮಕೃಷ್ಣ ಭಟ್, ಸಹಾಯಕ ವ್ಯವಸ್ಥಾಪಕ ಶ್ರೀನಿವಾಸ್ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಉಮೇಶ್ ಗೌಡ ಗುತ್ತಿನಪಾಲು ಸ್ವಾಗತಿಸಿ, ಜಿನ್ನಪ್ಪ ಗೌಡ ಸಾಲ್ಯಾನ್ ವಂದಿಸಿದರು. ಸಂಘದ ಸದಸ್ಯರು, ನಿರ್ದೇಶಕರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.