ಅಳದಂಗಡಿಯಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ

0

ಅಳದಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ತಾಲೂಕಿನ ಇತರ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ, ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಇದರ ಆಶ್ರಯದಲ್ಲಿ ಯುವ ಜನ, ಮಹಿಳಾ ಸಬಲ ವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ ಎಂಬ ವಿಷಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹವು ನ.19 ರಂದು ಶ್ರೀ ಗುರು ಸಭಾಭವನ, ಸ್ವರಾಜ್ ಟವರ್‍ಸ್ ಅಳದಂಗಡಿಯಲ್ಲಿ ಜರುಗಿತು.

ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸರಕಾರ ಮಾರಾಟ ಮಹಾಮಂಡಲ ಅಧ್ಯಕ್ಷ, ಬೆಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೆನೇಜಿಂಗ್ ಟ್ರಸ್ಟಿ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ನೆರವೇರಿಸು ಶುಭಕೋರಿದರು.

ಅಳದಂಗಡಿ ಪ್ರಾ.ಕೃ.ಪ.ಸಹಕಾರ ಸಂಘ ಅಧ್ಯಕ್ಷ ಶಿವ ಭಟ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜರವರು ಸಹಕಾರಿ ಧ್ವಜಾರೋಹಣಗೈದು ಶುಭಕೋರಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ , ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ.ಜಿ.ಸ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ಮಂಗಳೂರು ದ.ಕ.ಜಿ.ಕೇ. ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಬಿ.ನಿರಂಜನ್,ದ.ಕ.ಜಿ.ಸ.ಹಾ.ಉ.ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಮಂಗಳೂರು ದ.ಕ.ಜಿ.ಸಹಕಾರಿ ಯೂನಿಯನ್ ಉಪಾಧ್ಯಕ್ಷ ಇ ಸುಂದರ ಗೌಡ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಮಂಗಳೂರು ದ.ಕ.ಸ ಯೂನಿಯನ್ ನಿರ್ದೇಶಕಿ ಶ್ರೀಮತಿ ಸಾವಿತ್ರಿ ರೈ, ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ,, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶ್ರೀಮತಿ ತ್ರಿವೇಣಿ ರಾವ್, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ ಪ್ರತಿಮಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಚಿತ್ತರಂಜನ್ ಬೋಳುವಾರು,ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಸತೀಶ್ ಕೆ, ಸಿಇಒ ಮೀರಾ, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು ಹಾಗೂ ತಾಲೂಕಿನ ವಿವಿದ ಸಿ.ಎ ಬ್ಯಾಂಕ್ ನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸಭಾವೇದಿಕೆಯವರೆಗೆ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ರುಗಳು, ಉಪಾಧ್ಯಕ್ಷರುಗಳು ಮತ್ತು ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ ನಡೆಯಿತು.

LEAVE A REPLY

Please enter your comment!
Please enter your name here