HomePage_Banner
HomePage_Banner
HomePage_Banner

ಡಾ. ಪರಿಭಾ ಮುಖರ್ಜಿಯವರಿಗೆ ಮಾರಣಾಂತಿಕ ಹಲ್ಲೆ ಪ್ರಕರಣ

Puttur_Advt_NewsUnder_1
Puttur_Advt_NewsUnder_1
  • ಜೂ. 17 ತುರ್ತು ಚಿಕಿತ್ಸೆ ಹೊರತುಪಡಿಸಿ 24 ಗಂಟೆ ಒಪಿಡಿ ಸ್ಥಗಿತ
  • ಸರಕಾರಿ ಆಸ್ಪತ್ರೆಯಲ್ಲಿ ಒಪಿಡಿ

ಪುತ್ತೂರು: ಕೊಲ್ಕತ್ತದಲ್ಲಿ ವೈದ್ಯರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಖಂಡಿಸಿ ಹಾಗೂ ವೈದ್ಯರ, ವೈದ್ಯಕೀಯೇತರ ಸಿಬಂದಿಗಳ ಮೇಲೆ ಹಲ್ಲೆ ತಡೆಗಟ್ಟಲು ಕೇಂದ್ರ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ಜೂ. 17 ರಿಂದ 18ರ ತನಕ ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದು, ಪುತ್ತೂರಿನಲ್ಲೂ ವೈದ್ಯ ಸಂಘಟನೆ ಬೆಂಬಲ ಪ್ರಕಟಿಸಿದೆ.

ಭಾರತೀಯ ವೈದ್ಯಕೀಯ ಸಂಘ ಒಪಿಡಿ ಸ್ಥಗಿತಗೊಳಿಸಿ ನಡೆಸುತ್ತಿರುವ ಪ್ರತಿಭಟನೆಯಂದ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ಸರಕಾರಿ ಆಸ್ಪತ್ರೆಯಲ್ಲಿ 24 ಗಂಟೆ ಒಪಿಡಿ ಕಾರ್ಯ ನಿರ್ವಹಿಸಲಿದೆ. ಸರಕಾರಿ ಆಸ್ಪತ್ರೆ ಮತ್ತು ಪ್ರಾಥಮಿಕ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಸಿಬಂದಿಗಳು ಕರ್ತವ್ಯದಲ್ಲಿ ಇರುತ್ತಾರೆ. ರೋಗಿಗಳಿಗೆ ಯಾವುದೇ ತೊಂದರೆ  ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ ತಿಳಿಸಿದ್ದಾರೆ.

ರೋಗಿಯ ಸಂಬಂಧಿಕರೋರ್ವರು ಜೂನ್ 10ರಂದು ಎನ್‌ಆರ್‌ಎಸ್ ವೈದ್ಯಕೀಯ ಸಂಸ್ಥೆಯ ಕಿರಿಯ ವೈದ್ಯ ಡಾ. ಪರಿಭಾ ಮುಖರ್ಜಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಕುರಿತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂ.14ರಂದು ವೈದ್ಯರು ತಮ್ಮ ಸೇವೆಯೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ್ದರು. ಆದರೆ ಸರಕಾರ ಇನ್ನೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಹಾಗೂ ವೈದ್ಯರ ಹಾಗೂ ವೈದ್ಯಕೀಯೇತರ ಸಿಬಂದಿಗಳ ಮೇಲೆ ಹಲ್ಲೆ ತಡೆಗಟ್ಟಲು ಕೇಂದ್ರ ಸರಕಾರವು ರಾಷ್ಟ್ರಮಟ್ಟದ ಕಠಿಣವಾದ ಕಾನೂನು ಜಾರಿಗೊಳಿಸಿ ವೈದ್ಯ ಸಮೂಹ ನಿರ್ಭೀತಿಯಿಂದ ಕೆಲಸ ಮಾಡುವಂತಾಗಬೇಕೆಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಜೂ.17ರ ಬೆಳಿಗ್ಗೆ ಗಂಟೆ 6 ರಿಂದ ಜೂ. 18ರ ಬೆಳಿಗ್ಗೆ ಗಂಟೆ 6ರ ತನಕ ದೇಶವ್ಯಾಪಿ ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಎಲ್ಲಾ ವೈದ್ಯರು ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸಲಿದ್ದಾರೆ. ಸಾರ್ವಜನಿಕರಿಗೆ ಆಗುವ ತೊಂದರೆಗೆ ವಿಷಾದಿಸುತ್ತೇವೆ ಹಾಗೂ ಸಾರ್ವಜನಿಕರು ವೈದ್ಯರ ಈ ಕಠಿಣ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಸಹಕರಿಸುವಂತೆ ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಘಟಕದ ಅಧ್ಯಕ್ಷ ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಮತ್ತು ಕಾರ್ಯದರ್ಶಿ ಡಾ. ಅಶೋಕ್ ಜಿ.ಕೆ ವಿನಂತಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.