ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಾವ್ಯದಲ್ಲಿ ಮಕ್ಕಳ ಗ್ರಾಮಸಭೆ

0

ಸಾವ್ಯ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸಾವ್ಯದಲ್ಲಿ ನ.21ರಂದು ಮಕ್ಕಳ ಗ್ರಾಮಸಭೆಯು ಜರುಗಿತು. ಗ್ರಾ.ಪಂ ಅಧ್ಯಕ್ಷರಾದ ಜಯಂತಿ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ನಾಯಕ ಧನುಷ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಂಡಿಂಜೆ ಶಾಲಾ ನಾಯಕನಾದ ಶ್ರೇಯಸ್ , ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಹರ್ಷಿತಾ, ಗ್ರಾ.ಪಂ ಉಪಾಧ್ಯಕ್ಷರಾದ ಶ್ವೇತಾ, ಸದಸ್ಯರಾದ ಹರೀಶ್ ಹೆಗ್ಡೆ, ಶೋಭಾ ನಾಯ್ಕ್, ಸುಜಾತ, ಸರೋಜ, ಪಂ. ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಚಂಪಾ, ಎಸ್ ಡಿಎಂಸಿ ಅಧ್ಯಕ್ಷರಾದ ದಯಾನಂದ ಉಪಸ್ಥಿತರಿದ್ದರು.

ಅಂಡಿಂಜೆ ಶಾಲಾ ಮುಖ್ಯ ಶಿಕ್ಷಕರಾದ ಗುರುಮೂರ್ತಿ ಇವರು ಮಕ್ಕಳ ಗ್ರಾಮ ಸಭೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಡಿಂಜೆ ಗ್ರಾ.ಪಂ ಸಿಬ್ಬಂದಿ ಶೀನ ಹಿಂದಿನ ಮಕ್ಕಳ ಗ್ರಾಮ ಸಭೆಯ ವರದಿಯನ್ನು ಮಂಡಿಸಿದರು. ಸಾವ್ಯ ಶಾಲಾ ಮುಖ್ಯ ಶಿಕ್ಷಕರಾದ ಸಂತೋಷ್ ಇವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪಂ ಸದಸ್ಯರಾದ ಶೋಭಾ ನಾಯ್ಕ್ ವಂದಿಸಿದರು. ಸಾವ್ಯ ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here