Home_Page_Advt
Home_Page_Advt
Home_Page_Advt

ಬೆಟ್ಟಂಪಾಡಿ: ಸ್ವಚ್ಛ ಮೇವ ಜಯತೇ ಚರ್ಚಾ ಸ್ಪರ್ಧೆಯಲ್ಲಿ ಮನ್ಯಶ್ರೀ ಪ್ರಥಮ ‌

Puttur_Advt_NewsUnder_1
Puttur_Advt_NewsUnder_1


ನಿಡ್ಪಳ್ಳಿ: ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ‘ಸ್ವಚ್ಛ ಮೇವ ಜಯತೇ’ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ಮನ್ಯಶ್ರೀ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆಯ  ಜ್ಯೋತಿಕ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಸ್ಪರ್ಧಾ ಕಾರ್ಯಕ್ರಮ ಬೆಟ್ಟಂಪಾಡಿ ಪ್ರೌಢಶಾಲೆಯಲ್ಲಿ ಜೂ.15 ರಂದು  ನಡೆಯಿತು. ಬೆಟ್ಟಂಪಾಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲಿಂಗಮ್ಮ ವಿಜೇತರಿಗೆ ಪ್ರಶಸ್ತಿ ನೀಡಿದರು. ಕ್ಲಸ್ಟರ್ ಸಿ. ಆರ್.ಪಿ ಜನಾರ್ದನ ಅಲ್ಚಾರ್, ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲಾ ದೈ.ಶಿ ಶಿಕ್ಷಕಿ ಚಂದ್ರಕಲಾ ಕೆ.ವಿ, ಪಾಣಾಜೆ ಸುಬೋಧ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.