ಕೆ.ಜಿ.ಬಂಗೇರರ 101 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಗುರುದೇವ ಕಾಲೇಜಿನಲ್ಲಿ ವಾಲಿಬಾಲ್ ಪಂದ್ಯಾಟ

0

ಬೆಳ್ತಂಗಡಿ : ‘ಕ್ರೀಡೆಯಲ್ಲಿ ಭಾಗವಹಿಸುವುದು, ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಳ್ಳುವುದು ಮಾನವ ಗುಣವಾಗಿದೆ. ಹಾಗಾಗಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಮನಸ್ಸನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು’ ಎಂದು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ರಂಜನ್ ಜಿ. ಗೌಡ ಹೇಳಿದರು.

ಅವರು ನ.19 ರಂದು ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಸದಸ್ಯ ಕೆ. ಜಿ.ಬಂಗೇರರಿಗೆ ನ. 26 ರಂದು 101 ನೇ ವರ್ಷದ ಹುಟ್ಟು ಹಬ್ಬ ನಡೆಯುತ್ತಿದ್ದು, ಆ ಪ್ರಯುಕ್ತ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯುಸಿ ವಿಭಾಗದ ಬಾಲಕರ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ವಸಂತ ಬಂಗೇರ ವಹಿಸಿ ಮಾತನಾಡಿ, ‘ ಯಾವುದೇ ಸ್ಪರ್ದೆಯಲ್ಲಿ ಸೋಲು ಗೆಲುವು ಇದ್ದೆ ಇರುವುದು. ಹಾಗಾಗಿ ಸ್ಪರ್ಧೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಭಾಗವಹಿಸುವ ಮನಸ್ಸು ಎಲ್ಲರಲ್ಲೂ ಇರಬೇಕು’ ಎಂದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸದಸ್ಯ ಪೀತಾಂಬರ ಹೇರಾಜೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಪದ್ಮನಾಭ ಮಾಣಿಂಜ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು, ನಾರಾವಿ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ವಕೀಲ ಮನೋಹರ್ ಕುಮಾರ್, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಮಾಜಿ ಎಪಿಎಂಸಿ ಅಧ್ಯಕ್ಷ ಭರತ್ ಕುಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಉಪಸ್ಥಿತರಿದ್ದರು.

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಧಾಕೃಷ್ಣ ಟಿ, ಅಮಿತಾನಂದ ಹೆಗ್ಡೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಮಚಂದ್ರ ದೊಡ್ಡಮಣಿ, ಗುಣ ಪ್ರಸಾದ್ ಕಾರಂದೂರು, ಯಶೋಧರ ಸುವರ್ಣ ಇವರನ್ನು ಸನ್ಮಾನಿಸಲಾಯಿತು.

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಶಮೀವುಲ್ಲಾ ಸ್ವಾಗತಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಪ್ರಸ್ತಾವಿಸಿದರು. ಉಪನ್ಯಾಸಕರುಗಳಾದ ಗಣೇಶ್ ಶಿರ್ಲಾಲು, ಮಲ್ಲಿಕಾ, ಮಾಯಾ ಭಟ್, ಸವಿತಾ, ಸುಷ್ಮಾ ಸನ್ಮಾನಿತರನ್ನು ಪರಿಚಯಿಸಿದರು. ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ದೀಪಾ ಎಸ್ ಸುವರ್ಣ ವಂದಿಸಿದರು.

LEAVE A REPLY

Please enter your comment!
Please enter your name here