ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಟೋರಿಕ್ಷಾ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

0

ಮುಂಡಾಜೆ: ಮುಂಡಾಜೆಯ  ಕಾಪು ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಮೃತ್ಯುಂಜಯ ಹೊಳೆಗೆ ಪಲ್ಟಿಯಾದ ಘಟನೆ ನ.24 ರಂದು ನಡೆದಿದೆ.

ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ರಿಕ್ಷಾದಲ್ಲಿ 4 ಜನ ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here