ಅಂಡಿಂಜೆ: ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ವಿಶೇಷ ಮಹಿಳಾ ಗ್ರಾಮಸಭೆಯು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನ.24ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಇವರು ವಹಿಸಿದ್ದರು.
ಸಭೆಯಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಮಹಿಳಾ ಗ್ರಾಮ ಸಭೆಯ ಉದ್ಧೇಶದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಮೇಲ್ವೀಚಾರಕರಾದ ಶ್ರೀಮತಿ ಗುಣವತಿ, ಆರೋಗ್ಯ ಇಲಾಖೆಯ ಸೌಲಭ್ಯಗಳು ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಕುರಿತು ಆರೋಗ್ಯ ಕಾರ್ಯಕರ್ತೆ ಸವಿತಾ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ ಸಂವಹನ ತಾಲೂಕು ಸಂಯೋಜಕಿಯಾದ ಶ್ರೀಮತಿ ವಿನಿಷಾ ರವರು ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮಹಿಳೆಯರ ಭಾಗವಹಿಸುವಿಕೆಯ ಕುರಿತು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.
ಪಂಚಾಯತ್ ಕಾರ್ಯದರ್ಶಿ ಚಂಪಾ ಇವರು ಕಾರ್ಯಕ್ರಮ ನಿರೂಪಿಸಿರು.
ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಮಲ್ಲಿಕಾರವರು ಸ್ವಾಗತಿಸಿ, ಪಂಚಾಯತ್ ಸದಸ್ಯರಾದ ಶೋಭಾ ನಾಯ್ಕ ವಂದಿಸಿದರು. ಪಂ. ಸಿಬ್ಬಂದಿಗಳು ಸಹಕರಿಸಿದರು.