ಬೆಟ್ಟಂಪಾಡಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2019-20 ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಕ್ಷಿತ್ ರೈ, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ಹರ್ಷಿಣಿ. ಯು ಹಾಗೂ ಜತೆಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಮಿತಾರವರುಗಳು ಅವಿರೋಧವಾಗಿ ಆಯ್ಕೆಯಾದರು.
ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಂಕಿತ್ ಕೆ.ಆರ್. ಹಾಗೂ ಇಕೋ ಕ್ಲಬ್ ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಬ್ದುಲ್ ಹಕೀಂ ಮತ್ತು ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆಮಿನತ್ ಸೆಫೀನಾ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗಳನ್ನು ಕನ್ನಡ ಉಪನ್ಯಾಸಕ ಪ್ರಕಾಶ ಮತ್ತು ಜೀವಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಎಂ ನಡೆಸಿಕೊಟ್ಟರು.