ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಂಸ್ಥೆಯ ಹಳೆವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ನಡೆಯಿತು.
ತರಬೇತುದಾರರಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಯಂ.ಕಾಲೇಜಿನ ಉಪನ್ಯಾಸಕ ಅವನೀಶ್ ಪೆರಿಯಡ್ಕರವರು ವಿದ್ಯಾರ್ಥಿಗಳಿಗೆ ನಾಯಕತ್ವದ ಬಗ್ಗೆ ಮಾಹಿತಿ ನೀಡಿ, ನಾಯಕತ್ವ ನಮ್ಮ ಜೀವನದ ಅವಿಭಾಜ್ಯ ಅಂಗ. ಪ್ರತಿ ವಿದ್ಯಾರ್ಥಿಯು ತಮ್ಮಲ್ಲಿ ಈ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ನಾಯಕನಿಗೆ ಮಾತ್ರವೇ ಯಶಸ್ಸು ದೊರೆಯುತ್ತದೆ ಎಂದರು.
ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನ ಮಾಡುವುದರ ಮೂಲಕ ನಾಯಕತ್ವದ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಎಂ.ಸತೀಶ್ ಭಟ್ರವರು ಮಾತನಾಡಿ ಮುಂದಿನ ನಾಯಕರಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದು ಹೇಳಿದರು. ಎನ್.ಎಸ್.ಎಸ್ ಸಹಯೋಜನಾಧಿಕಾರಿ ಸತೀಶ್ ಜಿ.ಆರ್ ಸ್ವಾಗತಿಸಿದರು .
ಎನ್.ಎಸ್.ಎಸ್ ಯೋಜನಾಧಿಕಾರಿ ಗಣರಾಜ ಕುಂಬ್ಳೆ ವಂದಿಸಿದರು. ವಿದ್ಯಾರ್ಥಿನಿಯರಾದ ಸ್ಪೂರ್ತಿ ಮತ್ತು ಬಳಗದವರು ಪ್ರಾರ್ಥಿಸಿದರು. ಉಪನ್ಯಾಸಕ ಚೇತನ್ ಯಂ. ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರಾದ ನವೀನ್ ಮತ್ತು ಗಿರೀಶ್ ಕುಮಾರ್ ಉಪಸ್ಥಿತರಿದ್ದರು.