ಪುತ್ತೂರು: 2018-19 ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿ ಗಳಿಗೆ ನಡೆಸುವ ಪೂರಕ ಪರೀಕ್ಷೆಯು ಜೂ. 21 ರಿಂದ ಜೂ.28ರವರೆಗೆ ನಡೆಯಲಿದೆ.
ಎಸ್ಎಸ್ಎಲ್ಸಿ ಪೂಕರ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಪೂರ್ಣ ಸಿದ್ದತೆಗಳನ್ನು ಮಾಡಿಕೊಂಡಿದೆ. ಜೂ.21: ಗಣಿತ, ಸಮಾಜಶಾಸ್ತ್ರ, ಜೂ.22: ಅರ್ಥಶಾಸ್ತ್ರ, ಜೂ.24: ವಿಜ್ಞಾನ, ಜೂ.25: ಪ್ರಥಮ ಭಾಷೆ ಕನ್ನಡ, ಜೂ.26: ಸಮಾಜ ವಿಜ್ಞಾನ, ಜೂ.27: ದ್ವಿತೀಯ ಭಾಷೆ ಇಂಗ್ಲಿಷ್, ಜೂ.28: ತೃತೀಯ ಭಾಷೆ ಹಿಂದಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳು ಬೆಳಿಗ್ಗೆ 9.30 ರಿಂದ 12.30 ರ ವರೆಗೆ ನಡೆಯಲಿದೆ.
ಪ್ರವೇಶ ಪತ್ರ ವೆಬ್ಸೈಟ್ನಲ್ಲಿ: ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ(ಹಾಲ್ ಟಿಕೆಟ್) ಪರೀಕ್ಷಾ ಮಂಡಳಿಯ ವೆಬ್ಸೈಟ್ www.kseeb.kar.nic.inನಲ್ಲಿ ಅಪ್ಲೋಡ್ ಮಾಡಲಾಗಿದ್ದು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಲಾಗಿನ್ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಸಂಬಂಧಿಸಿದಂತೆ ಸಂಶಯ, ಸಂದೇಹಗಳಿದ್ದಲ್ಲಿ ಸಹಾಯವಾಣಿ 080-23310075, 080-23310076 ನಂಬರ್ಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
2 ಪರೀಕ್ಷಾ ಕೇಂದ್ರಗಳು: ತಾಲೂಕಿನಲ್ಲಿ ಒಟ್ಟು 647 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದು ನಗರದ ಸೈಂಟ್ ವಿಕ್ಟರ್ಸ್ ಬಾಲಕಿಯರ ಪ್ರೌಢ ಶಾಲೆ ಹಾಗೂ ದರ್ಬೆ ಸಂತ ಫಿಲೋಮಿನಾ ಪ್ರೌಢ ಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ ಡಿ.ಎನ್ ತಿಳಿಸಿದ್ದಾರೆ.