ಕಡಬ: ಇಲ್ಲಿನ ಸರಸ್ವತೀ ವಿದ್ಯಾಲಯದ ಪ್ರೌಢಶಾಲೆ ವಿಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಡಾ.ಕಲಾಂ ವಿಜ್ಞಾನ ಪ್ರಯೋಗಾಲಯ’ದ ಉದ್ಘಾಟನಾ ಸಮಾರಂಭ ಜೂ.22ರಂದು ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಸ್. ಅಂಗಾರ ಅವರು ಪ್ರಯೋಗಾಲಯವನ್ನು ಉದ್ಘಾಟಿಸಲಿದ್ದಾರೆ.
ಸಿಸ್ಕೋ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ, ರಘುನಂದನ್, ಉದ್ಯಮಿಗಳಾದ ಮಾಧವ ಗೌಡ ಕತ್ಲಡ್ಕ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ, ಸರಸ್ವತೀ ಸಮೂಹ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಕಡಬ, ಸರಸ್ವತೀ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ವೆಂಕಟ್ರಮಣ ರಾವ್ ಮಂಕುಡೆ, ಸಿಸ್ಕೋ ಸಂಭ್ರಮ ತಂಡ ಬೆಂಗಳೂರು ಉಪಸ್ಥಿತಿಯಲ್ಲಿ ಕಾರ್ಯಕ್ರಮ ಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.