HomePage_Banner
HomePage_Banner
HomePage_Banner

ಹಿರೇಬಂಡಾಡಿ: ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಹಿರೇಬಂಡಾಡಿ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಬೆಂಗಳೂರು ಇದರ ಪ್ರಾಯೋಜಕತ್ವದೊಂದಿಗೆ ಕೊಲ ಗೋಕುಲನಗರ ಯಕ್ಷನಂದನ ಕಲಾಸಂಘ ಮತ್ತು ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಯ ಆಶ್ರಯದಲ್ಲಿ ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನಾ ಕಾರ್‍ಯಕ್ರಮವು ಇತ್ತೀಚೆಗೆ ನಡೆಯಿತು.

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಜಬ್ಬಾರ್ ಸುಮೋ ತರಬೇತಿ ಶಿಬಿರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಸಾಮಾಜಿಕ ಸಾಮರಸ್ಯವನ್ನು ಬೆಸೆಯುವುದು ಯಕ್ಷಗಾನದ ಮೂಲ ಉದ್ದೇಶ. ಇಲ್ಲಿ ಯಾವುದೇ ರೀತಿಯ ತಾರತಮ್ಯವಿಲ್ಲ, ಹಲವಾರು ಸಮಸ್ಯೆಗಳ ನಡುವೆಯೂ ಇಂದು ಯಕ್ಷಗಾನವು ಬೆಳೆದಿದೆ. ಇಲ್ಲಿನ ತರಬೇತಿ ಶಿಬಿರವು ಯಶಸ್ವಿಯಾಗಿ ಮುನ್ನಡೆಯಲಿ ಎಂದರು. ಖ್ಯಾತ ಯಕ್ಷಗಾನ ಕಲಾವಿದ, ಯಕ್ಷಗಾನ ನಾಟ್ಯಗುರು ಲಕ್ಷ್ಮಣ ಆಚಾರ್‍ಯ ಎಡಮಂಗಲ, ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಕೃಷ್ಣ ಹೊಸಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷ ಶೌಕತ್ ಅಲಿ ಸಭೆಯ ಅಧ್ಯಕ್ಷತೆ ವಹಿಸಿದರು.

ಗೋಕುಲನಗರ ಯಕ್ಷನಂದನ ಕಲಾ ಸಂಘದ ಅಧ್ಯಕ್ಷ, ಉಪನ್ಯಾಸಕರೂ ಆದ ಗಣರಾಜ ಕುಂಬ್ಳೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಕೃಷ್ಣಮೂರ್ತಿ ವಂದಿಸಿದರು. ಕಾರ್‍ಯದರ್ಶಿ ಹರಿಕಿರಣ ಕಾರ್‍ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಭಾಸ್ಕರ ಬಟ್ಟೋಡಿ ಹಾಗೂ ಶುತಿ ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.