ನೆಲ್ಯಾಡಿ: ಪುತ್ತೂರಿನ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ವಚ್ಛಮೇವ ಜಯತೇ ಕಾರ್ಯಕ್ರಮದ ಚರ್ಚಾ ಸ್ಪರ್ಧೆಯಲ್ಲಿ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಮೌಸಮಿಯವರು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.