HomePage_Banner
HomePage_Banner
HomePage_Banner

ನೆಲ್ಯಾಡಿ: 1ನೇ ತರಗತಿ ಆಂಗ್ಲಮಾಧ್ಯಮ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳಲಿರುವ ಒಂದನೇ ತರಗತಿಯ ಆಂಗ್ಲಮಾಧ್ಯಮ ವಿಭಾಗದ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಸುಳ್ಯ ಕ್ಷೇತ್ರ ಶಾಸಕ ಎಸ್.ಅಂಗಾರರವರು ತರಗತಿ ಉದ್ಘಾಟಿಸಿ ಶುಭಹಾರೈಸಿದರು. ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಮಕ್ಕಳಿಗೆ ಇಂಗ್ಲಿಷ್ ಕಲಿಕೆಯ ಮೊದಲ ಪಾಠವನ್ನು ಬೋಧಿಸಿ ಚಾಲನೆ ನೀಡಿದರು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ಉಷಾ ಅಂಚನ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಬರಹಗಾರ, ಚಿಂತಕರೂ ಆದ ರಾಜೇಂದ್ರ ಶೆಟ್ಟಿಯವರು ಶುಭ ಹಾರೈಸಿದರು. ಎಪಿಎಂಸಿ ಸದಸ್ಯ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಸದಸ್ಯ ಅಬ್ರಹಾಂರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಇಸ್ಮಾಯಿಲ್ ಸ್ವಾಗತಿಸಿದರು. ಮುಖ್ಯಗುರು ಆನಂದ ಅಜಿಲ ವಂದಿಸಿದರು. ಶಿಕ್ಷಕ ವಿಮಲ್ ಕುಮಾರ್ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.