ಉಜಿರೆಯಲ್ಲಿ ಸ್ವಚ್ಛತಾ ಅಭಿಯಾನ

0

ಉಜಿರೆ : ಉಜಿರೆ ಜೇಸಿಸ್ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಉಜಿರೆ ಸ್ವಚ್ಛತಾ ಅಭಿಯಾನ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಭಿಯಾನವನ್ನು ಉದ್ಘಾಟಿಸಿದರು. ಉಜಿರೆ ಜೇಸಿಯ ಅಧ್ಯಕ್ಷ ಜೇಸಿ. ದೀಕ್ಷಿತ್ ರೈ ಅಧ್ಯಕ್ಷತೆ ವಹಿಸಿದ್ದರು.

ಎಸ್.ಡಿ.ಎಂ ಪ.ಪೂ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ನಾಯಕರಾದ ವಂಶಿ ಭಟ್, ವರ್ಧಿನಿ, ಜಯಂತ್ ಹಾಗೂ ಪ್ರಣಮ್ಯಾ ಜೈನ್ ನೇತೃತ್ವದಲ್ಲಿ ಸ್ವಯಂ ಸೇವಕರು ಉಜಿರೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ಮಾಡಿದರು.

LEAVE A REPLY

Please enter your comment!
Please enter your name here