Home_Page_Advt
Home_Page_Advt
Home_Page_Advt

ರಾಮಕುಂಜ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ರಾಮಕುಂಜ ಮಹಾವಿದ್ಯಾಲಯದಲ್ಲಿ 2019-20ನೇ ಸಾಲಿಗೆ ಪ್ರಥಮ ವರ್ಷದ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸ್ವಾಗತ ಕಾರ್ಯಕ್ರಮ ಜೂ.19ರಂದು ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ವೇದವ್ಯಾಸರವರು ಮಾತನಾಡಿ, ವಿದ್ಯಾರ್ಥಿಗಳೇ ದೇಶದ ಅತೀ ದೊಡ್ಡ ಸಂಪತ್ತು. ಈ ಸಂಪತ್ತನ್ನು ಕಿಂಚಿತ್ತೂ ನಿರ್ಲಕ್ಷಿಸಬಾರದು, ಜಗತ್ತಿಗೆ ಕೇವಲ ‘ಒಳ್ಳೆಯ’ದನ್ನು ಮಾತ್ರ ನೀಡುವ ವಿದ್ಯಾಭ್ಯಾಸ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು ಎಂದು ಹೇಳಿ, ಕಾಲೇಜಿನ ಲಾಂಛನದಲ್ಲಿರುವಂತೆ ವಿದ್ಯೆಯನ್ನು ಕಲಿಯಲು ಪ್ರಚೋದನೆ ನೀಡುವುದು ಹಾಗೂ ವಿದ್ಯಾವಂತರಿಗೆ ಚೇತನ ನೀಡುವುದೇ ಕಾಲೇಜಿನ ಪ್ರಮುಖ ಧ್ಯೇಯ ಎಂದರು. ಕಾಲೇಜಿನ ನೀತಿ ನಿಯಮಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ನೈಮೀಷರವರು ಮಾತನಾಡಿ, ಪೇಜಾವರ ಶ್ರೀಗಳ ಕನಸಿನ ಕೂಸಾಗಿರುವ ಈ ವಿದ್ಯಾಲಯವನ್ನು ಇನ್ನಷ್ಟು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಪೋಷಕರ ಸಹಕಾರವೂ ಅತ್ಯವಶ್ಯ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡು ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜು ಕೈಪಿಡಿಯಲ್ಲಿ ಅಳವಡಿಸಿಕೊಳ್ಳಲಾದ ಉರಿಮಜಲು ರಾಮಭಟ್ ರಚಿತ ಆಶಯಗೀತೆಯನ್ನು ಹಾಡಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸಂಕೀರ್ತ್ ಹೆಬ್ಬಾರ್ ಹಾಗೂ ರಕ್ಷಕ ಶಿಕ್ಷಕ ಸಂಘದ ಸಂಯೋಜಕಿ ಲೀಲಾವತಿ.ಹೆಚ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಲತನ್.ಜಿ.ಎಸ್. ಸ್ವಾಗತಿಸಿ, ಗುರುಕಿರಣ್ ವಂದಿಸಿದರು. ಅಜಿತ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.