ಡಿ.4 : `ವಸಂತ ವಿನ್ಯಾಸ’ ಪುಸ್ತಕದ ಅನಾವರಣ ಕಾರ್ಯಕ್ರಮ: ಮಾಜಿ ಶಾಸಕ ಕೆ.ವಸಂತ ಬಂಗೇರರ ಸುಧೀರ್ಘ ಸಾರ್ವಜನಿಕ ಬದುಕಿನ ನೈಜ ಚಿತ್ರಣ

0


ಬೆಳ್ತಂಗಡಿ: ರಾಜ್ಯದ ಹಿರಿಯ ರಾಜಕಾರಣಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಐದು ಭಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ, ವಿಧಾನ ಸಭೆಯ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿ ಅಪಾರ ಅನುಭವನ್ನು ಹೊಂದಿರುವ ಮಾಜಿ ಶಾಸಕ ಕೆ. ವಸಂತ ಬಂಗೇರರ 50 ವರ್ಷಗಳ ಸುಧೀರ್ಘ ಸಾರ್ವಜನಿಕ ಬದುಕಿನ ನೈಜ ಚಿತ್ರಣವನ್ನು ಒಳಗೊಂಡ ಖ್ಯಾತ ಸಾಹಿತಿ, ವಿಮರ್ಶಕ, ಶಿಕ್ಷಕರಾದ ಅರವಿಂದ ಚೊಕ್ಕಾಡಿ ಅವರು ಬರೆದಿರುವ `ವಸಂತ ವಿನ್ಯಾಸ’ ಪುಸ್ತಕದ ಅನಾವರಣ ಕಾರ್ಯಕ್ರಮ ಡಿ.೪ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಜರುಗಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ಹೇಳಿದರು.

ಅವರು ನ.30ರಂದು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ವಿಧಾನ ಸಭೆಯ ಪ್ರತಿಪಕ್ಷ ನಾಯಕ ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಪುಸ್ತಕದ ಅನಾವರಣ ಮಾಡಿ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತ ಪುಸ್ತಕದ ಪರಿಚಯವನ್ನು ಮಾಡಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕ ಕೆ. ವಸಂತ ಬಂಗೇರ ಉಪಸ್ಥಿತರಿರುವರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಶುಭಾಶಂಸನೆ ಮಾಡಲಿದ್ದಾರೆ. ಪುಸ್ತಕದ ಲೇಖಕರಾದ ಅರವಿಂದ ಚೊಕ್ಕಾಡಿಯವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ ಸಾಹಿತ್ಯಸಕ್ತರು, ಬಂಗೇರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದರು.

ಜೈ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ದೇವಿ ಪ್ರಸಾದ್ ಅವರು ಮಾತನಾಡಿ ಇದು ರಾಜಕೀಯ ಕಾರ್ಯಕ್ರಮವಲ್ಲ, ಸಾಹಿತ್ಯಿಕ ಕಾರ್ಯಕ್ರಮವಾಗಿದ್ದು, ಈ ಪುಸ್ತಕದಲ್ಲಿ ಬಂಗೇರರ 50 ವರ್ಷಗಳ ಸುಧೀರ್ಘ ಸಾರ್ವಜನಿಕ ಬದುಕಿನ ಚಿತ್ರಣ ಇದೆ. ಸುಮಾರು ಎರಡು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಅದೇ ದಿನ ಸಂಜೆ ನಡೆಯುವ ಕ್ರೀಡಾಕೂಟದಲ್ಲಿ ಪುಸ್ತಕದ ಪ್ರದರ್ಶನ ಇರಲಿದೆ ಅಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಲ್ಲ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಸಂಚಾಲಕರಾದ ನೇಮಿರಾಜ ಕಿಲ್ಲೂರು, ಶೇಖರ ಲಾಲ, ಜಯರಾಮ ಮಯ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here