ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ರಾಜ್ಯಶಾಸ್ತ್ರ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನ. 26 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್ ಏಮ್ ಇವರು ವಹಿಸಿ ವಿದ್ಯಾರ್ಥಿಗಳಿಗೆ ಸಂವಿಧಾನ ಎಂದರೇನು? ಪ್ರಸ್ತುತ ಕಾಲದಲ್ಲಿ ಸಂವಿಧಾನದ ಅವಶ್ಯಕತೆ ಮತ್ತು ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆಯನ್ನು ವಿವರಿಸುವುದರ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರೊಫೆಸರ್ ರಾಜನ್ ವಿ ಎನ್ ನಿವೃತ್ತ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವ ರೀತಿ ಸಮಸ್ಯೆಗಳನ್ನು ಎದುರಿಸಬೇಕು ಮತ್ತು ಆತ್ಮಸ್ಥೈರ್ಯವನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂದು ಮಾತನಾಡಿದರು . ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶ್ರೀನಾಥ್ ಬಿ ಎಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯಸ್ಥರಾದ ಪ್ರೊಫೆಸರ್ ಪ್ರಶಾಂತ್ ಉಪಸ್ಥಿತರಿದ್ದರು.