HomePage_Banner
HomePage_Banner
HomePage_Banner

ಡಾ. ಪ್ರಭಾಕರ ಭಟ್ ಕಲ್ಲಡ್ಕರವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಮತ್ತು ಪ್ರಚೋದನಾಕಾರಿ ಭಾಷಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಹಿರಿಯ ಮುಖಂಡರಾದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

2018ರ ಏ.15ರಂದು ಬಜ್ಪೆಯ ಕಜೆಪದವಿನಲ್ಲಿ ನಡೆದಿದ್ದ ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳ ಘಟಕದ ದಶಮಾನೋತ್ಸವದ ಪ್ರಯುಕ್ತದ ಧಾರ್ಮಿಕ ಸಭೆಯಲ್ಲಿ ಡಾ.ಪ್ರಭಾಕರ ಭಟ್‌ರವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲದೆ ಪ್ರಚೋದನಾಕಾರಿ ಭಾಷಣ ನಡೆಸಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಗಿರೀಶ್ ಶೆಟ್ಟಿಗಾರ್‌ರವರು ನೀಡಿದ್ದ ದೂರಿನಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಭಾಕರ ಭಟ್‌ರವರು ತನ್ನ ಮೇಲಿನ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್‌ರವರಿದ್ದ ಪೀಠವು ಬಜ್ಪೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಅದರ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಡಾ.ಪ್ರಭಾಕರ ಭಟ್‌ರವರ ಪರ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ವಕೀಲ ಅರುಣ್‌ಶ್ಯಾಮ್ ಪುತ್ತೂರುರವರು, ಪ್ರಭಾಕರ ಭಟ್‌ರವರ ವಿರುದ್ಧದ ಆರೋಪಗಳು ಅಸಂಜ್ಞೇಯ ಅಪರಾಧದ ಸ್ವರೂಪದ್ದಾಗಿದೆ, ಈ ಬಗ್ಗೆ ಕೇಸು ದಾಖಲಿಸಬೇಕಾದರೆ ಮ್ಯಾಜಿಸ್ಟ್ರೇಟರಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕಿದೆ. ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಿಲ್ಲ, ಮಾತ್ರವಲ್ಲದೆ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ. ಆದ್ದರಿಂದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ನ್ಯಾಯಪೀಠದ ಗಮನ ಸೆಳೆದಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.