HomePage_Banner
HomePage_Banner
HomePage_Banner

ಜೂ.21 – 22: ‘ಆಳ್ವಾಸ್-ಪ್ರಗತಿ’ ಬೃಹತ್ ಉದ್ಯೋಗ ಮೇಳ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಪ್ರಮುಖ ವಲಯ ಗಳ ಅವಕಾಶಗಳೊಂದಿಗೆ ಜೂ.21 ಮತ್ತು 22ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.

ಹನ್ನೊಂದನೆ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ’ಯನ್ನು ಜೂ.21ರಂದು ಪೂರ್ವಾಹ್ನ 9.30 ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ| ಎಸ್. ಸಚ್ಚಿದಾನಂದ ಉದ್ಘಾಟಿಸಲಿದ್ದು ಮೂಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್‍ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಆಳ್ವಾಸ್ ಪ್ರಗತಿ-೨೦೧೯ರ ಹನ್ನೊಂದನೆ ಆವೃತ್ತಿಯಲ್ಲಿ ಐಟಿ, ಐಟಿಎಸ್. ಮ್ಯಾನುಫ್ಯಾಕ್ಷರಿಂಗ್, ಹೆಲ್ತ್‌ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಅಟೋಮೊಬೈಲ್, ಬ್ಯಾಂಕಿಂಗ್ ಮತ್ತು ಹಣಕಾಸು, ಹಾಸ್ಪಿಟಾಲಿಟಿ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಆರ್ಟ್ಸ್, ಕಾಮರ್ಸ್ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಇತರ ವಿದ್ಯಾರ್ಹತೆಗಳುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಸೂಚನೆಗಳು: ಆಳ್ವಾಸ್ ಪ್ರಗತಿ-2019ರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.alvaspragati.com ವೆಬ್‌ಸೈಟ್‌ನ್ನು ಲಾಗಿನ್ ಆಗಬಹುದು.

ನೋಂದಾವಣೆ ಪ್ರಕ್ರಿಯೆಯು ಎಲ್ಲಾ ಅಭ್ಯರ್ಥಿಗಳಿಗೆ ಮುಕ್ತವಾಗಿದ್ದು, ಜೂ.21 ಹಾಗೂ 22 ಎರಡು ದಿನ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಆನ್‌ಲೈನ್ ನೋಂದಾವಣೆ ಕಡ್ಡಾಯವಾಗಿದ್ದು, ಆ ಮೂಲಕ ಸಂಗ್ರಹವಾದ ಮಾಹಿತಿಯನ್ನು ನೇಮಕಾತಿ ಪ್ರಕ್ರಿಯೆ ಸುಲಲಿತವಾಗಿ ನಡೆ ಯಲು ಬಳಸಿಕೊಳ್ಳಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ: 9611686148, 9663190590, 8494934852, 9008907716
ಅಭ್ಯರ್ಥಿಗಳ ಉಚಿತ ನೋಂದಾವಣೆಗಾಗಿ: http://alvaspragati.com ಸಂಪರ್ಕಿಸಬಹುದು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.