ಪುತ್ತೂರು: ಸವಣೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ವಿಶ್ವಯೋಗ ದಿನಾಚರಣೆ ನಡೆಯಿತು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ಮಾಜಿ ಅಧ್ಯಕ್ಷ ಶಿವರಾಮ ಗೌಡ ಮೆದು, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಶಾಲಾ ಮುಖ್ಯ ಗುರು ಹರಿಕೃಷ್ಣ ಭಟ್ ಉಪಸ್ಥಿತರಿದ್ದರು.
ಬಾಲಕೃಷ್ಣ ಕೆ. ಸ್ವಾಗತಿಸಿದರು. ತುಳಸಿ ಧನ್ಯವಾದ ಮಾಡಿದರು. ಆಶಾಲತಾ, ದೇವಮ್ಮ ಬೇಲೂರು ಕಾರ್ಯಕ್ರಮ ನಿರೂಪಣೆ ಮಾಡಿದರು.