ಪುತ್ತೂರು: ಸಂಪ್ಯ ಆರ್ಯಾಪು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಜೂ.21ರಂದು ಶ್ರೀಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಸುರೇಶ ನಕ್ಷತ್ರಿತ್ತಾಯ ರವರ ಉಪಸ್ಥಿತಿಯಲ್ಲಿ ನಡೆಯಿತು.
ಬೆಳಿಗ್ಗೆ 8 ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಶ್ರೀಸತ್ಯನಾರಾಯಣ ಪೂಜೆ, ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.